

ಬೆಳ್ತಂಗಡಿ: ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿ.ವಿ. ಇತ್ತೀಚೆಗೆ ಆಯೋಜಿಸಿದ ಚರ್ಚಾ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಬಿಎಡ್ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ.
‘ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಗಳ ಪಾತ್ರ ಮಹತ್ತರ’ ಎಂಬ ವಿಷಯದಲ್ಲಿ ಚರ್ಚೆ ಮಂಡಿಸಿದ ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ ವಿದ್ಯಾರ್ಥಿನಿ ಫಾತಿಮತ್ ರಾಫಿಯಾ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವಂದದವರು ವಿದ್ಯಾರ್ಥಿಗಳು, ಅಭಿನಂದನೆ ಸಲ್ಲಿಸಿದ್ದಾರೆ.