ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್‌ಡಿಎಂ ಪಿಯು ಕಾಲೇಜು ಪ್ರಥಮ

New Project (17)
Published on

ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಶುಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.

ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಸುಮೇಧಾ ಗಾಂವ್ಕರ್ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಉಪ ಪ್ರಾಂಶುಪಾಲ ಡಾ.ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗರಾಜ್ ಬಿ.ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net