ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೆ ಸಂಪನ್ನ

Bel_Janardana Temple
Published on

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರೆ ಬುಧವಾರ ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತು. ಸಂಕ್ರಮಣದಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರೆಯಲ್ಲಿ ದೈವಗಳಿಗೆ ನೇಮೋತ್ಸವ, ದೇವರ ಉತ್ಸವ, ಪೇಟೆ ಸವಾರಿ ಚಂದ್ರಮಂಡಲ ಉತ್ಸವ ದರ್ಶನ ಬಲಿ ಮೊದಲಾದ ಧಾರ್ಮಿಕ ವಿಧಿವಿಧಾನಗಳು ನಡೆದು ಮಂಗಳವಾರ ರಾತ್ರಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದೇವಸ್ಥಾನದ ರಥ ಬೀದಿಯಲ್ಲಿ ಮಹಾರಥೋತ್ಸವ, ಬಳಿಕ ಶ್ರೀ ಭೂತ ಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಿತು.

ಬುಧವಾರ ಬೆಳಗ್ಗೆ ಕವಾಟೋದ್ಘಾಟನೆ, ರಾತ್ರಿ ನಿಡಿಗಲ್ ನೇತ್ರಾವತಿ ನದಿಗೆ ದೇವರು ಬಂದು ಅವಭೃತೋತ್ಸವ ನಡೆದು ಬಳಿಕ ಧ್ವಜಾವರೋಹಣ ನಡೆಯಿತು. ಇಂದು(ಜ.23) ಬೆಳಗ್ಗೆ ಕಲಶಾಭಿಷೇಕ ಸಂಪ್ರೋಕ್ಷಣೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net