More

    ಉತ್ಪನ್ನಗಳ ಮಾರಾಟಕ್ಕೆ ಮಾಸಿಕ ಸಂತೆ ಸಹಕಾರಿ

    ಉಜ್ಜಿನಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವುದಕ್ಕಾಗಿ ಸಮೀಪದ ನಿಂಬಳಗೆರೆಯಲ್ಲಿ ಬುಧವಾರ ‘ಮಾಸಿಕ ಸಂತೆ’ ನಡೆಯಿತು.


    ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ), ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.


    ಪಂಚಾಯಿತಿ ವ್ಯಾಪ್ತಿಯ 30ಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಟ್ಟು ಮಾರಾಟ ಮಾಡಿದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.

    ಉತ್ಪನ್ನಗಳ ಮಾರಾಟಕ್ಕೆ ಮಾಸಿಕ ಸಂತೆ ಸಹಕಾರಿ


    ಎನ್‌ಆರ್‌ಎಲ್‌ಎಂ ತಾಲೂಕು ವ್ಯವಸ್ಥಾಪಕ ಎಚ್.ಎಂ. ಗಿರೀಶ್, ಗ್ರಾಪಂ ಅಧ್ಯಕ್ಷೆ ಗಂಗಮ್ಮ ಮಹಾಂತೇಶ್, ಸನ್ನಿಧಿ ಸಂಜೀವಿನಿ ಗ್ರಾಮ ಘಟಕದ ಅಧ್ಯಕ್ಷೆ ಭರಮಕ್ಕ, ಕಾರ್ಯದರ್ಶಿ ಜಿ. ಗಂಗಮ್ಮ, ಯುವ ವೃತ್ತಿಪರ ಆಚಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸೇವಾ ಪ್ರತಿನಿಧಿ ಎಂ.ಜಿ. ತಿಪ್ಪಮ್ಮ, ತಾಲೂಕು ಪಂಚಾಯಿತಿಯ ರೂಪಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts