ಹುಕ್ಕೇರಿ: ಮಹಿಳೆಯರ ಆರೋಗ್ಯ ದೃಷ್ಟಿ ಹಾಗೂ ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಜ್ವಲಾ ಗ್ಯಾಸ್ ಯೋಜನೆ ಪ್ರಾರಂಭಿಸಿದ್ದು, ಲಕ್ಷಾಂತರ ಕುಟುಂಬಗಳು ಲಾಭ ಪಡೆಯುತ್ತಿವೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ಸ್ಥಳೀಯ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಫಲಾನುಭವಿಗಳಿಗೆ ಉಜ್ವಲಾ ಗ್ಯಾಸ್ ಸಿಲಿಂಡರ್ ವಿತರಿಸಿ ಮಾತನಾಡಿದ ಪರಿಣಾಮಕಾರಿಯಾಗಿ ದಿ.ಉಮೇಶ ಕತ್ತಿ ಅವರು ಹುಕ್ಕೇರಿ ಕ್ಷೇತ್ರದಲ್ಲಿ ಯೋಜನೆ ಸಾಕಷ್ಟು ಅನುಷ್ಠಾನಗೊಳಿಸಿದ್ದಾರೆ. ಇದೀಗ ಹುಕ್ಕೇರಿ ಪಟ್ಟಣ ಮತ್ತು ಎಲಿಮುನ್ನೋಳಿ ಗ್ರಾಮದ 79 ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸುತ್ತಿದ್ದೇವೆ ಎಂದರು.
ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಪ್ಪ ನಾಯಿಕ, ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ, ಹಿರಾ ಶುಗರ್ಸ್ ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ, ಬಸವರಾಜ ಮರಡಿ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪರಗೌಡ ಪಾಟೀಲ, ಗುರು ಕುಲಕರ್ಣಿ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಭೀಮಗೌಡ ಗಿರಿಗೌಡನವರ ಇತರರಿದ್ದರು.