More

    ಭಾರತ-ಚೀನಾ ಗಡಿ ಬಿಕ್ಕಟ್ಟು: ಪರಿಸ್ಥಿತಿ ಗಂಭೀರವಾಗಿದೆ ಎಂದ ಬ್ರಿಟಿಷ್​ ಪ್ರಧಾನಿ

    ಲಂಡನ್​: ಸದ್ಯ ಪೂರ್ವ ಲಡಾಖ್​​ನ ಗ್ವಾಲನ್ ಕಣಿವೆ ಬಳಿ ನಡೆಯುತ್ತಿರುವ ಭಾರತ-ಚೀನಾ ಸಂಘರ್ಷದೆಡೆಗೆ ವಿಶ್ವದ ಅನೇಕ ರಾಷ್ಟ್ರಗಳು ಕಣ್ಣಿಟ್ಟಿವೆ.

    ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಈ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯೆ ನೀಡಿಯೂ ಆಗಿದೆ. ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಸಿದ್ಧ ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ. ಇದನ್ನೂ ಓದಿ: ವಿಶಾಲ್​ ಚಿತ್ರದ ಟ್ರೇಲರ್​ ಬಿಡುಗಡೆ ಮಾಡ್ತಿರೋ ಕನ್ನಡದ ಸ್ಟಾರ್​ ನಟ ಯಾರು?

    ಇದೀಗ ಬ್ರಿಟಿಷ್​ ಪ್ರಧಾನಿ ಬೋರಿಸ್​ ಜಾನ್ಸನ್​ ಅವರು ಭಾರತ ಮತ್ತು ಚೀನಾ ಗಡಿ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಎರಡೂ ದೇಶಗಳ ಗಡಿ ವಿವಾದವನ್ನು ಯುಕೆ ಗಮನಿಸುತ್ತಿದ್ದು, ಅಲ್ಲಿ ಗಂಭೀರ ಹಾಗೂ ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

    ನಿನ್ನೆ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗ ನಡೆಸಿದ ಪ್ರಶ್ನೋತ್ತರದ ವೇಳೆ ಅಲ್ಲಿನ ಸಂಸದರೊಬ್ಬರು ಭಾರತ-ಚೀನಾ ಗಡಿ ವಿವಾದ ಪ್ರಸ್ತಾಪಿಸಿದ ಸಂದರ್ಭದಲ್ಲಿ ಬೋರಿಕ್​ ಹೀಗೆ ಹೇಳಿದ್ದಾರೆ. ಇದನ್ನೂ ಓದಿ: ಯಾವ ದೇಶ ಮೊದಲಿಗೆ ಪಡೆಯುತ್ತೆ ಕರೊನಾ ಲಸಿಕೆ? ಭಾರತಕ್ಕೂ ಖುಲಾಯಿಸುತ್ತೆ ಅದೃಷ್ಟ

    ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಸಹಜ ಸ್ಥಿತಿಗೆ ಬರಬೇಕಾದರೆ ಎರಡೂ ರಾಷ್ಟ್ರಗಳು ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಉತ್ತಮ. ನಾವೂ ಕೂಡ ಈ ಹೊತ್ತಲ್ಲಿ ಇದನ್ನೇ ಪ್ರೋತ್ಸಾಹಿಸಬೇಕು ಎಂದಿದ್ದಾರೆ.

    ಜೂ.15ರಂದು ಗಲ್ವಾನ್​ ಕಣಿವೆಯಲ್ಲಿ ನಡೆದ ಸಂಘರ್ಷದ ಬಗ್ಗೆ ಈಗಾಗಲೇ ಭಾರತ ಮತ್ತು ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆದಿವೆ. ಗಡಿಯಲ್ಲಿ ಇರುವ ಪರಿಸ್ಥಿತಿಯ ಬಗ್ಗೆಯೂ ಸಮಗ್ರವಾಗಿ ಚರ್ಚೆ ಮಾಡಲಾಗಿದೆ. (ಏಜೆನ್ಸೀಸ್​)

    ಭಾರತ, ಚೀನಾ, ದಕ್ಷಿಣ ಆಫ್ರಿಕಾಕ್ಕೆ ಸಂಬಂಧಪಟ್ಟ ಆತಂಕಕಾರಿ ಸುದ್ದಿ ಇದು; ಅಧ್ಯಯನವೊಂದರ ವರದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts