ಪಡುವನ್ನೂರು ಬಿಲ್ಲವ ಗ್ರಾಮ ಸಮಿತಿ ಮಹಾಸಭೆ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

New Project (14)
Published on

ಪುತ್ತೂರು ಗ್ರಾಮಾಂತರ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಪಡುವನ್ನೂರು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಭಾನುವಾರ ಸುಳ್ಯಪದವಿನಲ್ಲಿ ನಡೆಯಿತು.

ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ದನ ಪೂಜಾರಿ ಪದಡ್ಕ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಚಿದಾನಂದ ಸುವರ್ಣ ಜಿ.ಕೆ., ಕೋಶಾಧಿಕಾರಿ ಮಹೇಶ್ಚಂದ್ರ ಸಾಲಿಯಾನ್, ಕುಂಬ್ರ ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ಆರ್.ಸಿ.ನಾರಾಯಣ ರೆಂಜ, ಪುತ್ತೂರು ಬಿಲ್ಲವ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ವಿಮಲಾ ಸುರೇಶ್ ಮುಖ್ಯ ಅತಿಥಿಗಳಾಗಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸತೀಶ್ ಕುಮಾರ್ ಕೆಡೆಂಜಿ, ಆರ್.ಸಿ.ನಾರಾಯಣ ರೆಂಜ, ರಾಜೇಶ್ ಎಂ., ಮಾಧವ ಸಾಲಿಯಾನ್ ಮರದಮೂಲೆ, ಪ್ರಕಾಶ್ ಮರದಮೂಲೆ, ವಿಠಲ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಸಮಿತಿ ವತಿಯಿಂದ 50 ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ ಮಾಡಲಾಯಿತು. ಪಡುವನ್ನೂರು ಗ್ರಾಮ ಸಮಿತಿ ಉಪಾಧ್ಯಕ್ಷ ವಿಠಲ ಸುವರ್ಣ, ಮಹಿಳಾ ಸಮಿತಿ ಅಧ್ಯಕ್ಷೆ ವಿನಯ ಕುಮಾರಿ ಉಪಸ್ಥಿತರಿದ್ದರು. ವಿನೀಶಾ ಪ್ರಾರ್ಥಿಸಿದರು. ಸಮಿತಿ ಗೌರವಾಧ್ಯಕ್ಷ ಗಿರೀಶ್ ಕುಮಾರ್ ಕನ್ನಡ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net