
ಮದ್ದೂರು: ತಾಲೂಕಿನ ಹೆಮ್ಮನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸಿ.ಉಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಚ್.ಎಸ್.ಬಾಲಕೃಷ್ಣ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಬಾಲಕೃಷ್ಣ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಆಯ್ಕೆಯನ್ನು ಚುನಾವಣಾಧಿಕಾರಿ ಆಶಾ ಘೋಷಣೆ ಮಾಡಿದರು.
ಸಂಘದ ಅಧ್ಯಕ್ಷ ಎಸ್.ಸಿ.ಉಮೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗದುಕೊಂಡು ಸಂಘದ ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ ಹಾಗೂ ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಘದ ನಿರ್ದೇಶಕರಾದ ಶಿವಲಿಂಗಯ್ಯ, ಲಕ್ಷ್ಮಣ್, ಅಪ್ಪಾಜಿ, ದುಶ್ಯಂತ್‌ಗೌಡ, ಎಚ್.ಕೆ.ಪ್ರಭಾ, ಲಾವಣ್ಯ, ಅರ್ಪಿತಾ, ಲಕ್ಷ್ಮಮ್ಮ, ಪುಟ್ಟಾಚಾರಿ, ಮುಖಂಡರಾದ ನಾಗೇಶ್, ಶಿವಣ್ಣ, ಜಯಶಂಕರ, ರಾಘು, ರವಿ, ಬಾಬು, ಲೋಕೇಶ್, ಕೃಷ್ಣ, ದಿನೇಶ್, ಉಮೇಶ್ ಇದ್ದರು.