ಉಮೇಶ್ ಜಾದವ್ ರಾಜೀನಾಮೆ ಅಂಗಿಕಾರ ಕಷ್ಟ‌

ಹುಬ್ಬಳ್ಳಿ: ಉಮೇಶ್​ ಜಾದವ್​ ಕಾಂಗ್ರೆಸ್​ನಿಂದ ಆಯ್ಕೆಯಾದ ಶಾಸಕ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಅನರ್ಹತೆ ದೂರು ದಾಖಲಿಸಲಾಗಿದೆ. ಅದು ಬಾಕಿ ಇರುವಾಗ ರಾಜೀನಾಮೆ ಅಂಗೀಕಾರ ಅಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಉಮೇಶ್​ ಜಾದವ್, ರಮೇಶ್​ ಜಾರಕಿಹೊಳಿ, ನಾಗೇಂದ್ರ, ಮಹೇಶ್​ ಕುಮಠಳ್ಳಿ ವಿರುದ್ಧ ನಾನೇ ದೂರು ನೀಡಿದ್ದೇನೆ. ಪಕ್ಷಾಂತರ ಕಾಯ್ದೆ ಅಡಿಯಲ್ಲಿ ಅವರ ವಿರುದ್ಧ ಕ್ರಮ ಜರುಗಿಸಿ ಎಂದು ದೂರಿನಲ್ಲಿ ಹೇಳಿದ್ದೇನೆ. ಹೀಗಾಗಿ ಉಮೇಶ್​​ ಜಾಧವ್​ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದ ಅನ್ವಯವಾಗುತ್ತದೆ,” ಎಂದು ಹೇಳಿದ್ದಾರೆ.

ಅಲ್ಲದೆ, ಸ್ಪೀಕರ್ ರಾಜೀನಾಮೆ ಅಂಗಿಕಾರ ಮಾಡುವುದಿಲ್ಲ ಎಂದು ಅಂದುಕೊಂಡಿದ್ದೇನೆ ಎಂದೂ ಹೇಳಿದರು.

ಜಾಧವ್​ ಅವರು ಹಣಕ್ಕೆ ಮಾರಾಟವಾಗಿದ್ದಾರೆ ಎಂದ ಸಿದ್ದರಾಮಯ್ಯ, 25-30 ಕೋಟಿ ರೂಪಾಯಿಗಳ ವ್ಯವಹಾರ ನಡೆದಿರುವ ಸಾಧ್ಯತೆಗಳಿವೆ. ಹೀಗೆಂದು ಜನರೇ ಮಾತನಾಡುತ್ತಿದ್ದಾರೆ ಎಂದರು.