

ಹಾವೇರಿ: ಮದುವೆಯಾಗಲು ಹುಡುಗಿ ಸಿಗದೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ ನಾಗನೂರು(36) ಎಂದು ಗುರುತಿಸಲಾಗಿದ್ದು, ಕಳೆದ 8 ವರ್ಷಗಳಿಂದ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದರು. ಆದರೆ, ಯಾರು ಇವರಿಗೆ ಹೆಣ್ಣು ಕೊಡಲು ಮುಂದೆ ಬಂದಿರಲಿಲ್ಲ.
ಮದುವೆಯಾಗಲು ಹೆಣ್ಣು ಸಿಗದೆ ತೀವ್ರವಾಗಿ ಮನನೊಂದಿದ್ದ ಮಂಜುನಾಥ್ ನನ್ನಿಂದ ತಂದೆ-ತಾಯಿಗೆ ತುಂಬಾ ತೊಂದರೆಯಾಗುತ್ತಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ತಮ್ಮ ಜಮೀನಿನಲ್ಲಿ ವಿಷ ಕುಡಿದು ಪ್ರಾಣ ಬಿಟ್ಟಿದ್ಧಾರೆ.
ಸ್ಥಳಕ್ಕೆ ಭೇಟಿ ನೀಡಿದ ಬ್ಯಾಡಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.