More

    ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕಾರ

    ಬೆಳಗಾವಿ: ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಕ್ಷಾತೀತವಾಗಿ ಅಭಿವೃದ್ಧಿ ಕೈಗೊಂಡು, ಜನರ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ದಾರೆ.

    ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಳಗಾವಿ ತಾಲೂಕಿನಲ್ಲಿ ಕೈಗೊಂಡಿರುವ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಸಭೆ ಕರೆಯಲಾಗಿದೆ. ಶೀಘ್ರ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರತ್ಯೇಕ ಸಭೆ ಕರೆದು ಅಧಿಕಾರಿಗ ಳೊಂದಿಗೆ ಚರ್ಚಿಸಲಾಗುವುದು. ಕಾಲಮಿತಿಯಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಲಾಗುವುದು. ಸ್ಮಶಾನ ಭೂಮಿಗೆ ಮಂಜೂರಾತಿ ನೀಡಲಾಗುವುದು ಎಂದರು.

    ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸಲು ಒತ್ತಾಯ: ತಾಲೂಕಿನ ಮಚ್ಛೆ, ಪೀರನವಾಡಿ ಗ್ರಾಪಂಗಳಲ್ಲಿ 50 ಕ್ಕೂ ಅಧಿಕ ಸದಸ್ಯರಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚಿನ ಜನಸಂಖ್ಯೆ ಹೊಂದಿದ ಈ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಸಭೆಯಲ್ಲಿ ಸಚಿವರನ್ನು ಒತ್ತಾಯಿಸಿದರು.

    ಆಗ ಶಾಸಕ ಅಭಯ ಪಾಟೀಲ ಮಾತನಾಡಿ, ಮಚ್ಛೆ ಮತ್ತು ಪೀರನವಾಡಿ ಗ್ರಾಮಗಳು ಹೊಂದಿಕೊಂಡಿವೆ. ಎರಡನ್ನೂ ಒಟ್ಟಾಗಿಸಿ ನಗರ ಸ್ಥಳೀಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ಮಚ್ಛೆ, ಪೀರನವಾಡಿ, ಸಾಂಬ್ರಾ, ಹಿಂಡಲಗಾ ಸೇರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಸರ್ಕಾರದ ನರೇಗಾ ಯೋಜನೆಯಡಿ ಯಾವುದೇ ಕಾಮಗಾರಿ ಕೈಗೊಳ್ಳುವಾಗ ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು. ಶಾಸಕ ಅನಿಲ ಬೆನಕೆ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿದರು.

    ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಮತ್ತಿತರರು ಉಪಸ್ಥಿತರಿದ್ದರು. ಅದಕ್ಕೂ ಮುನ್ನ ಜಿಪಂ ವತಿಯಿಂದ ಸ್ವಚ್ಛ ಭಾರತ ಮಿಷನ್ ಅಡಿ ವಿವಿಧ ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಕಸ ಸಂಗ್ರಹಿಸುವ ವಾಹನಗಳನ್ನು ಸಚಿವ ರಮೇಶ ಜಾರಕಿಹೊಳಿ ಸಾರ್ವಜನಿಕ ಸೇವೆಗೆ ಚಾಲನೆ ನೀಡಿದರು.

    ಎಸ್‌ಟಿಪಿ ನಿರ್ಮಾಣಕ್ಕೆ ಮುಂದಾಗಿ: ಮಾರ್ಕಂಡೇಯ ನದಿಯ ಕಲುಷಿತ ನೀರು ಕಂಗ್ರಾಳಿ ಕೆ.ಎಚ್. ಗ್ರಾಮದ ತೆರೆದ ಬಾವಿಗಳಿಗೆ ಸೇರುತ್ತಿದೆ. ಈ ನೀರನ್ನು ಬಳಸಿದವರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಸದಸ್ಯೆ ಸರಸ್ವತಿ ಪಾಟೀಲ ಆರೋಪಿಸಿದರು. ಈ ಬಗ್ಗೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸಬೇಕು.

    ಕಲುಷಿತ ನೀರು ಅಥವಾ ತ್ಯಾಜ್ಯ ಪದಾರ್ಥಗಳು ನೇರವಾಗಿ ನದಿ ಸೇರದಂತೆ ಸಂಬಂಧಿತ ಸಂಸ್ಥೆಗಳೇ ತ್ಯಾಜ್ಯ ನಿರ್ವಹಣಾ ಘಟಕ (ಎಸ್‌ಟಿಪಿ) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಾರಕಿಹೊಳಿ ನಿರ್ದೇಶನ ನೀಡಿದರು. ಸಂಬಂಧಿತ ಸಂಸ್ಥೆ, ಅಪಾರ್ಟ್ ಮೆಂಟ್‌ಗಳು ಎಸ್‌ಟಿಪಿ ನಿರ್ಮಿಸಿಕೊಳ್ಳಬೇಕು. ಉಲ್ಲಂಸುವವರಿಗೆ ನೋಟಿಸ್ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸೂಚಿಸಿದರು.

    ಸೂಕ್ತ ಸಮೀಕ್ಷೆಗೆ ಅಂಗಡಿ ಸೂಚನೆ

    ಬೆಳಗಾವಿ ತಾಲೂಕು ಮಾತ್ರವಲ್ಲದೆ, ಜಿಲ್ಲೆಯ ಹಲವೆಡೆ ರೈತರಿಗೆ ಕಳಪೆ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ ಎಂದು ಸಾವಿರಾರು ರೈತರು ದೂರು ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಸಮೀಕ್ಷೆ ನಡೆಸಿ, ರೈತರಿಗೆ ಮೋಸವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts