ಮುದಗಲ್: ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆ ಕೈಬಿಡಿ
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಎಂ.ಡಿ.ರಫೀಕ್ ಖಾಜಿ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ ಹಾಗೂ ಮುಸ್ಲಿಂ ವಿರೋಧಿಯಾಗಿದೆ. ಅದನ್ನು ಎಸ್‌ಡಿಪಿಐ ವಿರೋಧಿಸುತ್ತದೆ. ಕೂಡಲೇ ಸರ್ಕಾರ ವಕ್ಫ್ ತಿದ್ದುಪಡಿ ಹಿಂಪಡೆಯಲಿ ಎಂದು ಒತ್ತಾಯಿಸಿದರು.
ದಂತ ವೈದ್ಯ ರಫೀ ಮಾತನಾಡಿ, ಯಾವುದೇ ಕಾರಣಕ್ಕೂ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ. ಒಂದು ವೇಳೆ ಕಾಯ್ದೆ ವಾಪಸ್ ಪಡೆಯದೇ ಇದ್ದರೆ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.