More

    ಮುಂಡರಗಿ: ನಮ್ಮ‌ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ

    ಮುಂಡರಗಿ: ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ಭಾನುವಾರ ಬೆಳಿಗ್ಗೆ ತಾಲೂಕಾ ಸ್ವೀಪ್ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಮ್ಮ‌ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿ

    ಜಾಥಾಗೆ ತಹಶೀಲ್ದಾರ ಧನಂಜಯ ಮಾಲಗತ್ತಿ ಅವರ ಜೊತೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕಾ ಸ್ವೀಪ್ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಸಮನಿ ಕಳೆದ ಚುನಾವಣೆಯಲ್ಲಿ ಪಟ್ಟಣದ ಕೋಟೆಭಾಗದ 43,44,45,46,47ನೇ ನಂಬರಿನ ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿದೆ. ಮೇ ಏಳರಂದು ನಡೆಯುವ ಲೋಕಸಭೆ ಚುನಾವಣೆಗೆ ಒಟ್ಟಾರೆ ನೂರಕ್ಕೆ ನೂರರಷ್ಟು ಮತದಾನವಾಗಬೇಕು ಎಂದರು.

    ನಂತರ ಪಟ್ಟಣದ ಮೇನ್ ಬಜಾರ್ ಮೂಲಕ  ಕೋಟೆ ಭಾಗದಲ್ಲಿ ಸಂಚರಿಸಿ ಧ್ವನಿ ವರ್ಧಕದ ಮೂಲಕ‌ ಮತದಾನದ ಪರ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿತು.

    ನಂತರ ಕೋಟೆಭಾಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ ಧನಂಜಯ ಮಾಲಗತ್ತಿ ಮತದಾನ ಪ್ರಮಾಣದ ಹೆಚ್ಚಳಕ್ಕೆ ಈ ಸಾರಿ ಮುಂಡರಗಿ ಪಟ್ಟಣದ ಎಲ್ಲ ಮತಗಟ್ಟೆ ಹಾಗೂ ಕಡಿಮೆ ಮತದಾನವಾದ ತಾಲೂಕಿನ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಇದೇ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಶಂಕರ ಮೂಲಮ್ಮನವರ, ವಿವಿಧ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ ಸಿಬ್ಬಂದಿಗಳು ಸೇರಿದಂತೆ ವಿವಿಧ ಸರಕಾರಿ ನೌಕರ ಸಂಘಟನೆಯ ಪದಾಧಿಕಾರಿಗಳು ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts