

ಬೆಂಗಳೂರು: ಇಂದು ಸಂಪುಟ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ಮಾಸಾಶನ ಪಡೆಯುವ ಮಹಿಳೆಯರಿಗೂ 2000 ರೂ. ಸಿಗುತ್ತಾ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,
"ನಾವು ಹೇಳಿರುವುದು ಮನೆ ಯಜಮಾನಿ ಖಾತೆಗೆ 2000 ರೂ. ಜಮೆ ಮಾಡುತ್ತೇವೆ. ಅವರ ಅಕೌಂಟ್ಗೆ ತಿಂಗಳಿಗೆ 2 ಸಾವಿರ ರೂ. ಜಮಾ ಮಾಡುತ್ತೇವೆ ಎಂದಿದ್ದೇವೆ. ಆದರೆ ಇದಕ್ಕಾಗಿ ಅಕೌಂಟ್ ನಂಬರ್, ಆಧಾರ್ ನಂಬರ್, ಅರ್ಜಿ ಮುಂತಾದವನ್ನು ನೀಡಬೇಕು. ನಂತರ ಇಲಾಖೆಯವರು ಈ ಮಾಹಿತಿಯನ್ನು ಪ್ರಾಸೆಸ್ ಮಾಡಿ ಆಗಸ್ಟ್ 15ನೇ ತಾರೀಕಿನಿಂದ ಈ ಯೋಜನೆಯನ್ನು ಜಾರಿಗೆ ತರುತ್ತಾರೆ. ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ. ಈ ಯೋಜನೆ ಎಲ್ಲಾ ಬಿಪಿಎಲ್ ಹಾಗೂ ಎಪಿಎಲ್ ಮಹಿಳೆಯರಿಗೆ ಈ ಲಾಭ ಸಿಗಲಿದೆ” ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಅತ್ತೆಗೆ 2000 ರೂ. ಸಿಗುತ್ತದೋ, ಸೊಸೆಗೆ ಸಿಗುತ್ತದೋ ಎಂಬ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಕುಟುಂಬದವರು ನೀಡಿದ ಮಾಹಿತಿಯ ಆಧಾರದ ಮೇಲೆ ಮನೆ ಒಡತಿಯ ಖಾತೆಗೆ ಹಣವನ್ನು ಜಮೆ ಮಾಡಲಾಗುತ್ತದೆ ಎಂದಿದ್ದರು. ಇದೇ ಸಂದರ್ಭದಲ್ಲಿ ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಅಂದರೆ, ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ಮಾಸಾಶನ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ ಎಂದು ಮಾತನಾಡುತ್ತದೆ.