ಹೊಸ ಕ್ರಿಮಿನಲ್ ಅಪರಾಧ ಕಾನೂನಿನಡಿ ದಿನವೇ ರಾಜ್ಯಾದ್ಯಂತ 63 ಎಫ್​ಐಆರ್​ ದಾಖಲು

blank

ಬೆಂಗಳೂರು: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದಿನಿಂದ ದೇಶಾದ್ಯಂತ ನೂತನ ಅಪರಾಧ ಕಾಯಿದೆ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದೆ. ಹೊಸ ಕಾನೂನು ಜಾರಿಯಾಗಿರುವ ಮೂರು ಹೊಸ ಕ್ರಿಮನಲ್ ಅಪರಾಧ ಕಾನೂನುಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 63 ಪ್ರಕರಣಗಳು ದಾಖಲಾಗಿವೆ.

blank

ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡಗೆ ಹೈಕೋರ್ಟ್‌ ಜಾಮೀನು

ಸೋಮವಾರ ರಾತ್ರಿ 8 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲಾಗಿದೆ. ಸೋಮವಾರ ತಡರಾತ್ರಿ ಯುಡಿಆರ್ ಪ್ರಕರಣ ದಾಖಲು ಮಾಡಿಕೊಳ್ಳಲಾಯಿತು ಎಂದು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ 126 ವರ್ಷಗಳ ಹಿಂದಿನ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳಲ್ಲಿ 20 ಹೊಸ ಅಪರಾಧಗಳ ಸೇರ್ಪಡೆಯಾಗಿದೆ. 33 ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. 83 ಅಪರಾಧಗಳಿಗೆ ಅಧಿಕ ದಂಡ ವಿಧಿಸುವ ಜೊತೆಗೆ 23 ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

blank

ಪ್ರಮುಖ ಸೆಕ್ಷನ್‌ಗಳು ಯಾವುವು?
420 : ಹಣಕಾಸು ಅಥವಾ ಬೇರೆ ಯಾವುದೇ ಆಮಿಷ ಒಡ್ಡಿ ವಂಚಿಸಿದ ಆರೋಪದ ಅಡಿ ಐಪಿಸಿ ಸೆಕ್ಷನ್ 420ರ ಅಡಿ ಕೇಸ್ ದಾಖಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ ಸೆಕ್ಷನ್ 318 ಆಗಿದೆ.
302 : ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಪ್ರಕರಣಕ್ಕೆ ಈ ಸೆಕ್ಷನ್ ಬಳಸಲಾಗುತ್ತಿತ್ತು. ಇದೀಗ ಭಾರತೀಯ ನ್ಯಾಯ ಸಂಹಿತೆಯಲ್ಲಿ 103 ಆಗಿದೆ.
307 : ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಯತ್ನಕ್ಕೆ ಬಳಸಲಾಗುತ್ತಿತ್ತು. ಇದೀಗ ಸೆಕ್ಷನ್ 103 ಆಗಿದೆ.
376 : ಭಾರತೀಯ ದಂಡ ಸಂಹಿತೆಯಲ್ಲಿ ಅತ್ಯಾಚಾರ ಪ್ರಕಣಗಳಿಗೆ ಈ ಸೆಕ್ಷನ್ ಬಲಸಲಾಗುತ್ತಿತ್ತು. ಇದೀಗ 64 ಆಗಿದೆ.
304(ಬಿ) : ಐಪಿಸಿ ನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಬಳಸುತ್ತಿದ್ದ ಸೆಕ್ಷನ್ ಈಗ ಬಿಎನ್‌ಎಸ್‌ನಲ್ಲಿ 80 ಆಗಿದೆ.
304(ಎ) : ಐಪಿಸಿ ನಲ್ಲಿ ನಿರ್ಲಕ್ಷ್ಯದಿಂದ ಮರಣ (ರಸ್ತೆ ಅಪಘಾತ ಅಥವಾ ಇತರೇ ಸಂದರ್ಭ) ವೇಳೆ ಬಳಸಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ 106 ಆಗಿದೆ.
359 : ವ್ಯಕ್ತಿ ಅಪಹರಣ ಪ್ರಕರಣದಲ್ಲಿ ಐಪಿಸಿ ನಲ್ಲಿ ಈ ಸೆಕ್ಷನ್ ಬಳಕೆಯಾಗುತ್ತಿತ್ತು. ಈಗ ಸೆಕ್ಷನ್ 137 ಆಗಿದೆ.
309 : ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದರೆ ಆತನ ವಿರುದ್ಧ ಐಪಿಸಿ ಅಡಿ ಈ ಸೆಕ್ಷನ್ ವಿಧಿಸಲಾಗುತ್ತಿತ್ತು. ಈಗ ಬಿಎನ್‌ಎಸ್ ಅಡಿ 226 ಆಗಿದೆ.

ಹರಿಯಾಣ ಬಳಿ ಕಾಂಗ್ರೆಸ್ ನಾಯಕನ ಸಹೋದರನ ಗುಂಡಿಕ್ಕಿ ಹತ್ಯೆ

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…