More

    5 ಕೇಂದ್ರಗಳಲ್ಲಿ ಸಿಇಟಿ, ಕರೊನಾ ಇದ್ದವರಿಗೆ ಪ್ರತ್ಯೇಕ ಕೊಠಡಿ

    ಚಿಕ್ಕಮಗಳೂರು: ಕರೊನಾ ಆತಂಕದಲ್ಲೂ ಪಿಯುಸಿ ಪರೀಕ್ಷೆ ನಡೆಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಜು.30, 31ರಂದು ಸಿಇಟಿ ಪ್ರವೇಶ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿದೆ. ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮದೊಂದಿಗೆ ಸಜ್ಜುಗೊಳಿಸಿದ್ದು, 2592 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

    ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಿದ್ದು ಕೆಲವು ಕೇಂದ್ರಗಳಲ್ಲಿ ಮಂಗಳವಾರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ನಮೂದಿಸಲಾಯಿತು. ಜು.29ರಂದು ನಗರಸಭೆಯಿಂದ ಸ್ಯಾನಿಟೈಸ್ ಮಾಡಲಾಗುತ್ತದೆ. ಪರೀಕ್ಷಾರ್ಥಿಗಳೆಲ್ಲರಿಗೂ ಪ್ರವೇಶ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಲಾಗಿದೆ.

    ಬೆಳಗ್ಗೆ 10.30ಕ್ಕೆ ಆರಂಭವಾಗುವ ಪರೀಕ್ಷೆಗೆ ಬೆಳಗ್ಗೆ 8 ಗಂಟೆ ವೇಳೆಗೆ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಪ್ರವೇಶ ದ್ವಾರದಲ್ಲೇ ಸ್ಯಾನಿಟೈಸರ್ ಸಿಂಪಡಣೆ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಇದಾದ ಕೂಡಲೇ ವಿದ್ಯಾರ್ಥಿಗಳು ಗುಂಪು ಸೇರುವುದಾಗಲಿ, ಬೇರೆಲ್ಲೂ ಸಾಗಲು ಅವಕಾಶವಿರುವುದಿಲ್ಲ. ನೇರವಾಗಿ ಕೊಠಡಿಗಳಿಗೆ ತೆರಳಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts