ಓಮ್ನಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ: ಕೊಲೆ ಶಂಕೆ

6962597.92752685-1311946.82075496.jpg
Published on

ಶಿವಮೊಗ್ಗ: ವಿದ್ಯಾನಗರ ರೈಲ್ವೆ ನಿಲ್ದಾಣ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಓಮ್ನಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಅಂದಾಜು 10 ದಿನಗಳ ಹಿಂದೆಯೇ ಓಮ್ನಿಯನ್ನು ರೈಲ್ವೆ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದು, ಉಡುಪಿ ಜಿಲ್ಲೆ ನೋಂದಣಿ ಹೊಂದಿರುವ ಓಮ್ನಿ ಇದಾಗಿದೆ. ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿಡಲಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತದೇಹ ಕೊಳೆತು ವಾಸನೆ ಬರುತ್ತಿರುವುದನ್ನು ಗಮನಿಸಿದ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಕಾವಲು ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಮೃತದೇಹ ಪತ್ತೆಯಾಗಿದೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಗಾರಕ್ಕೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net