

ಸುಳ್ಯ: ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಖಾಸಗಿ ಕಟ್ಟಡದ ಮುಂಭಾಗ ಶುಕ್ರವಾರ ಅಪರಿಚಿತ ವ್ಯಕ್ತಿಯ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸುಮಾರು 60ರಿಂದ 70 ವರ್ಷ ಪ್ರಾಯದ ವ್ಯಕ್ತಿಯ ಶವ ಇದಾಗಿದೆ. ಗುರುವಾರ ರಾತ್ರಿ ಮೃತಪಟ್ಟಿರುವ ಶಂಕೆ ಇದ್ದು, ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ.