Union Budget 2025; ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ

Income Tax
Published on

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮುಂದಿನ ವಾರ ಹೊಸ ಆದಾಯ ತೆರಿಗೆ ಬಿಲ್‌ ಮಂಡಿಸುವುದಾಗಿ ತಮ್ಮ ಬಜೆಟ್ (Budget) ಭಾಷಣದಲ್ಲಿ ಘೋಷಿಸಿದ್ದಾರೆ.

ದಾಖಲೆಯ 8ನೇ ಬಾರಿಗೆ ಬಜೆಟ್​ (Budget) ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​ ಅವರು ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್​ ಪಾತ್ರರಾಗಿದ್ದಾರೆ.

Nirmala Sitharaman

ತಮ್ಮ ಬಜೆಟ್​ ಭಾಷಣದಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಿರುವ ವಿತ್ತ ಸಚಿವರು ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳೀಕರಣ ಮಾಡುತ್ತದೆ ಎಂದು ತಿಳಿಸಿದ್ಧಾರೆ.

ಇದಲ್ಲದೆ ಕಿಸಾನ್​ ಕ್ರೆಡಿಟ್ ಕಾರ್ಡ್​ನಲ್ಲಿ ಸಾಲದ ಮಿತಿಯನ್ನು 3ರಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಈ ವಿಚಾರವನ್ನು ವಿತ್ತ ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಮೇಕ್​ ಇಂಡಿಯಾ ಉತ್ತೇಜಿಸುವ ಸಲುವಾಗಿ ವಿತ್ತ ಸಚಿವರು ಭರಪೂರ ಯೋಜನೆಗಳನ್ನು ಘೋಷಿಸಲಾಗಿದ್ದು, ಪ್ರತ್ಯೇಕ ಅನುದಾನವನ್ನು ಮೀಸಲಿಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net