Union Budget 2025; ಬಿಹಾರಕ್ಕೆ ಬಂಪರ್ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

Union Budget 2025
Published on

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್​ (Budget) ಮಂಡಿಸುತ್ತಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ.

ಅದರಂತೆ ಬಜೆಟ್​ನಲ್ಲಿ (Budget) ಬಿಹಾರಕ್ಕೆ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ, ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ, ಮಖಾನಾ ಮಂಡಳಿ ಸೇರಿದಂತೆ  ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸಂಸದರು ಗದ್ದಲವನ್ನು ಎಬ್ಬಿಸಿದ್ದಾರೆ. 

ಇದಲ್ಲದೆ ಕಿಸಾನ್​ ಕ್ರೆಡಿಟ್ ಕಾರ್ಡ್​ನಲ್ಲಿ ಸಾಲದ ಮಿತಿಯನ್ನು 3ರಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಈ ವಿಚಾರವನ್ನು ವಿತ್ತ ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಮೇಕ್​ ಇಂಡಿಯಾ ಉತ್ತೇಜಿಸುವ ಸಲುವಾಗಿ ವಿತ್ತ ಸಚಿವರು ಭರಪೂರ ಯೋಜನೆಗಳನ್ನು ಘೋಷಿಸಲಾಗಿದ್ದು, ಪ್ರತ್ಯೇಕ ಅನುದಾನವನ್ನು ಮೀಸಲಿಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net