More

    ಕೇಂದ್ರ ಸರ್ಕಾರದಿಂದ ರಾಜ್ಯಗಳ ತೆರಿಗೆ ಪಾಲು ಬಿಡುಗಡೆ; 72,961 ಕೋಟಿ ರೂಪಾಯಿಯಲ್ಲಿ ಕರ್ನಾಟಕಕ್ಕೆ ಎಷ್ಟು?

    ನವದೆಹಲಿ: ದೀಪಾವಳಿಯ ಧನತ್ರಯೋದಶಿ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂತಸದ ಸುದ್ದಿ ನೀಡಿದೆ. ಅರ್ಥಾತ್, ರಾಜ್ಯಗಳ ತೆರಿಗೆ ಪಾಲನ್ನು ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ್ದು, ಒಟ್ಟು 72,961.21 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

    ಈ ವರ್ಷದ ನವೆಂಬರ್ ತಿಂಗಳ ನ. 10ರಂದು ಬಿಡುಗಡೆ ಮಾಡಬೇಕಿದ್ದ ಈ ಮೊತ್ತವನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೂರು ದಿನಗಳ ಮುಂಚಿತವಾಗಿಯೇ ಬಿಡುಗಡೆ ಮಾಡಿದೆ. ಇದು ರಾಜ್ಯಗಳಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಕೇಂದ್ರ ಸರ್ಕಾರ 28 ರಾಜ್ಯಗಳಿಗೆ ಒಟ್ಟು 72,961.21 ಕೋಟಿ ರೂ. ಬಿಡುಗಡೆ ಮಾಡಿದ್ದು, ಆ ಪೈಕಿ ಕರ್ನಾಟಕಕ್ಕೆ 2,660.88 ಕೋಟಿ ರೂ. ನೀಡಲಾಗಿದೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿವೆ.

    12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!

    ನಿಮ್ಮಲ್ಲಿ ಹಳೇ ಚಪ್ಲಿ ಇದ್ರೆ ಸಾಕು, ನೀವು ಈ ‘ನಡಿಗೆ’ಯಲ್ಲಿ ಪಾಲ್ಗೊಳ್ಳಬಹುದು: ಏನಿದು ಅಭಿಯಾನ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts