More

    ಅಪಾಯಕಾರಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶೀಘ್ರದಲ್ಲಿ ಸುಗಮ ಸಂಚಾರ; ಹೀಗಿದೆ ಕಾರಣ

    ನವದೆಹಲಿ: ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್​ ರಸ್ತೆಯಲ್ಲಿನ 10.8 ಕಿಲೋಮೀಟರ್ ಉದ್ದದ ಎರಡು ಲೇನ್​ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 343 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ.

    ಈ ಹಿಂದೆ ಅಪಘಾತ, ಭೂಕುಸಿತದಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದ ಚಾರ್ಮಾಡಿ ಘಾಟ್​ನಲ್ಲಿ ಅನೇಕ ಸುರಕ್ಷತಾ ಕ್ರಮಗಳನ್ನು ಕೈಗೊಂಡರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಡಬಲ್​ ಲೇನ್​ ರಸ್ತೆ ನಿರ್ಮಿಸಲು ಮುಂದಾಗಿದೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಮಂಗಳೂರು-ಮೂಡಿಗೆರೆ-ತುಮಕೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಡ್ರೋನ್​ ಪ್ರತಾಪ್​ಗೆ ಸಿಹಿ ಮುತ್ತು ಕೊಟ್ಟ ಸಂಗೀತಾ; ವಿಡಿಯೋ ವೈರಲ್

    ಕರ್ನಾಟಕದಲ್ಲಿ NH-73ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ರಸ್ತೆ ವಿಸ್ತರಣೆಗೆ 343.74 ಕೋಟಿ ರೂ. ಮಂಜೂರು ಮಾಡಲಾಗಿದೆ. ಅದನ್ನು ಸುಸಜ್ಜಿತ 2-ಲೇನ್ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಈಗ 10.8 ಕಿಮೀ ವ್ಯಾಪಿಸಿರುವ ಈ ಯೋಜನೆಯು ಇಂಜಿನಿಯರಿಂಗ್ ಖರೀದಿ ಮತ್ತು ನಿರ್ಮಾಣ (EPC) ಮೋಡ್ ಅಡಿಯಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸವಾಲಿನ ಗುಡ್ಡಗಾಡು ಮತ್ತು ಪರ್ವತ ಭೂ ದೃಶ್ಯಗಳನ್ನು ಹೊಂದಿರುವ ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಸಂಚಾರವನ್ನು ಹಾಗೂ ಈ ಪ್ರದೇಶದ ಸಂಪರ್ಕವನ್ನು ಹೆಚ್ಚಳ ಮಾಡಲು ಈ ಅನುದಾನ ಸಮಪರ್ಕಕವಾಗಿ ಬಳಕೆ ಆಗಲಿದೆ ಎಂದು ಪ್ರಧಾನಿ ಕಚೇರಿ, ಸಿಎಂ ಸಿದ್ದರಾಮಯ್ಯ, ಪ್ರಲ್ಹಾದ್​ ಜೋಶಿ, ಭಗವಂತ್​ ಖೂಬಾ, ನಳಿನ್​ ಕುಮಾರ್​ ಕಟೀಲ್, ಬಿ.ವೈ. ವಿಜಯೇಂದ್ರ ಹಾಗೂ ಕರ್ನಾಟಕ ಬಿಜೆಪಿಯನ್ನು ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts