More

    ಮರಾಠಿ ಅಭಿವೃದ್ಧಿ ಪ್ರಾಧಿಕಾರ ಘೊಷಣೆಗೆ ವಿರೋಧಿಸಿ 5 ರಂದು ಜಿಲ್ಲಾ ಬಂದ್

    ಚಿಕ್ಕಮಗಳೂರು: ಮರಾಠಿ ಅಭಿವೃದ್ಧಿ ಪ್ರಾಧಿಕಾರ ಘೊಷಣೆ ವಿರೋಧಿಸಿ ಡಿ.5 ರಂದು ಕನ್ನಡ ಸಂಘಟನೆಗಳು ರಾಜ್ಯಾದ್ಯಂತ ಕರೆ ನೀಡಿರುವ ಬಂದ್​ಗೆ ವಿವಿಧ ರಾಜಕೀಯ ಪಕ್ಷ, ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು ಜನರು ಸಹಕರಿಸುವಂತೆ ಜಿಲ್ಲಾ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಸಿ.ರಾಜೇಗೌಡ ಮನವಿ ಮಾಡಿದರು.

    ಮಂಗಳವಾರ ಕನ್ನಡ ಸಂಘಟನೆಗಳ ಒಕ್ಕೂಟ ಕರೆದಿದ್ದ ವಿವಿಧ ರಾಜಕೀಯ ಪಕ್ಷ ಹಾಗೂ ಕನ್ನಡ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ಓರ್ವ ಸ್ವಾಮೀಜಿ, ಬಸವರಾಜ ಪಾಟೀಲ್ ಯತ್ನಾಳ್ ಅವರು ಮರಾಠಿಗರ ಪರ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

    ಸಿಪಿಐ ಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ಮಾತನಾಡಿ, ರಾಜಕೀಯ ಲಾಭಕ್ಕಾಗಿ ಜಾತಿವಾರು ಪ್ರಾಧಿಕಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.

    ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಕನ್ನಡ ಸಂಘಟನೆಗಳು ರಾಜ್ಯದಲ್ಲಿ ಹಲವು ದಿನಗಳಿಂದ ಪ್ರಾಧಿಕಾರ ರಚನೆ ವಿರೋಧಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸೌಜನ್ಯಕ್ಕಾದರೂ ಹೋರಾಟಗಾರರನ್ನು ಕರೆದು ರ್ಚಚಿಸಬಹುದಿತ್ತು. ಅದನ್ನು ಬಿಟ್ಟು ಬೆದರಿಕೆ ಹಾಕುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಆಟೋಚಾಲಕರ ಸಂಘದ ಅಧ್ಯಕ್ಷ ಜಗದೀಶ್ ಮರೇಬೈಲ್ ಮಾತನಾಡಿ, 80ಕ್ಕೂ ಹೆಚ್ಚು ಆಟೋ ನಿಲ್ದಾಣದ ಜತೆ 3 ಸಾವಿರಕ್ಕೂ ಹೆಚ್ಚು ಚಾಲಕರು, ಮಾಲೀಕರಿದ್ದಾರೆ. ಸಭೆ ಕರೆದು ರ್ಚಚಿಸಿ ಬಂದ್ ಕುರಿತಂತೆ ನಿರ್ಧಾರ ತಿಳಿಸಲಾಗುವುದು ಎಂದರು.

    ರಕ್ಷಣಾ ವೇದಿಕೆ ಅಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ, ಡಿ.5ರ ಬೆಳಗ್ಗೆ 11ಕ್ಕೆ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್​ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ರಾಜಕೀಯ ಮುಖಂಡರು , ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗಳಿಸುವಂತೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts