ನಕ್ಸಲರ ನಿರ್ಮೂಲನೆಗೆ ಗೃಹ ಸಚಿವ ಅಮಿತ್​ ಷಾ ನೇತೃತ್ವದಲ್ಲಿ ಹೈವೋಲ್ಟೆಜ್​ ಮೀಟಿಂಗ್​​

Untitled-design-2024-08-24T152521.477-1
Published on

ನವದೆಹಲಿ: ನಕ್ಸಲರ ಸಮಸ್ಯೆ ನಿವಾರಣೆ ಹಾಗೂ ನಕ್ಸಲೀಯ ಪೀಡಿತ ಪ್ರದೇಶಗಳ ಪುನರ್ ನಿರ್ಮಾಣಕ್ಕಾಗಿ ಗೃಹ ಸಚಿವ ಅಮಿತ್​ ಷಾ ನೇತೃತ್ವದಲ್ಲಿ ಶನಿವಾರ (ಆಗಸ್ಟ್​​ 24) ಸಮನ್ವಯ ಸಭೆ ನಡೆಯುತ್ತಿದೆ. ಮುಂದಿನ ಒಂದು ವರ್ಷದಲ್ಲಿ ನಕ್ಸಲರ ಚಟುವಟಿಕೆಗಳನ್ನು ಕೊನೆಗೊಳಿಸುವ ಗುರಿಯನ್ನು ಕೇಂದ್ರ ಹೊಂದಿದೆ.

ಉನ್ನತ ಮಟ್ಟದ ಸಭೆಯಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್​​​​ಸಾಯಿ, ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ಸಚಿವ ನಿತ್ಯಾನಂದ ರೈ, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ, ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮುಖ್ಯಸ್ಥರು ಭಾಗವಹಿಸಿದ್ದಾರೆ.

ಮುಂದಿನ ಒಂದೆರಡು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ದೇಶದಿಂದ ತೊಡೆದುಹಾಕಬೇಕು ಎಂದು ಗೃಹ ಸಚಿವರು ನಿರ್ದೇಶಿಸಿದ್ದಾರೆ. ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ನಕ್ಸಲೀಯರ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂಬುದು ಈ ಸಭೆಯ ಮುಖ್ಯ ಅಜೆಂಡವಾಗಿದೆ.

ಡಿಸೆಂಬರ್ 2023 ರಿಂದ ಈ ತಿಂಗಳವರೆಗೆ ಭದ್ರತಾ ಪಡೆಗಳು ಮವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 147 ನಕ್ಸಲರನ್ನು ಎನ್​ಕೌಂಟರ್​ ಮಾಡಲಾಗಿದೆ. ಅಲ್ಲದೆ 723 ನಕ್ಸಲ್ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, 622 ಮಂದಿ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net