ಮತ್ತೆ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ.. hd kumaraswamy health upset

hdk
Published on

ಬೆಂಗಳೂರು: ( hd kumaraswamy health upset  ) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ  ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನುವ ಸುದ್ದಿಯೊಂದು ಮೂಲಗಳಿಂದ ತಿಳಿದು ಬಂದಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಹೆಚ್‌.ಡಿ.ಕುಮಾರಸ್ವಾಮಿ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡಿದ್ದರು. ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net