blank

ನಾಗಮಂಗಲ ಕೋಮುಗಲಭೆ; ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ ಎಂದ ಎಚ್​ಡಿಕೆ

HD Kumaraswamy

ನವದೆಹಲಿ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ಬುಧವಾರ (ಸೆಪ್ಟೆಂಬರ್​ 11) ರಾತ್ರಿ ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಿಂದಾಗಿ ಸಂಪೂರ್ಣ ಪಟ್ಟಣವು ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಘಟನೆ ಸಂಬಂಧ ಪೊಲೀಸರು ಈವರೆಗೆ 46 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಿರಲಿ ಎಂದು ಪೊಲೀಸರು ಸೆಕ್ಷನ್​ 144ಅನ್ನು ಜಾರಿ ಮಾಡಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದು ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿ ದಾಂಧಲೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಎಚ್​ಡಿಕೆ, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.

ಇದನ್ನೂ ಓದಿ: ರಿಪೇರಿ ಸರಿಯಾಗಿ ಮಾಡಿಲ್ಲವೆಂದು ಶೋರೂಮ್​ಗೆ ಬೆಂಕಿಯಿಟ್ಟ ಭೂಪ; ಅಪಾರ ವಸ್ತು ನಾಶ

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್​​ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಘಟನೆಯ ಕುರಿತು ಕಿಡಿಕಾರಿದ್ದಾರೆ.

Share This Article

ನಿಮ್ಮ ಮಕ್ಕಳಿಗೆ ಪ್ರತಿನಿತ್ಯ ಟೀ ಕೊಡ್ತಿದ್ದೀರಾ? ಹೌದು ಎಂದಾದರೆ ಈ ವಿಚಾರಗಳು ನಿಮಗೆ ತಿಳಿದಿರಲೇಬೇಕು! Tea

Tea : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು…

ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha

Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…

ನೀವು ಈ ದಿನಾಂಕಗಳಲ್ಲಿ ಹುಟ್ಟಿದ್ದೀರಾ? ಹಾಗಾದರೆ 2025ರಲ್ಲಿ ನಿಮಗೆ ಅದೃಷ್ಟೋ ಅದೃಷ್ಟ… ಹಣದ ಸುಗ್ಗಿ ಗ್ಯಾರಂಟಿ! Numerology

Numerology : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…