ವಂಚನೆ ಪ್ರಕರಣ; ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರ Arrest

Gopal Joshi
Published on

ಹುಬ್ಬಳ್ಳಿ: ಈಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ (Loksabha Election) ಬಿಜೆಪಿ ಟಿಕೆಟ್​ ಕೊಡಿಸುವದಾಗಿ ₹2.25 ಕೋಟಿ ಸುಲಿಗೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ಪೊಲೀಸರು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಅವರ ಸಹೋದರ ಗೋಪಾಲ್​ ಜೋಶಿ (Gopal Joshi) ಅವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ (Arrest).

ವಂಚನೆ ಪ್ರಕರಣಕ್ಕೆ (Cheating Case) ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 03ಕ್ಕೆ ಏರಿಕೆಯಾಗಿದ್ದು, ಗೋಪಾಲ್ ಜೋಶಿ (Gopal Joshi) ಅವರ ಪುತ್ರ ಅಜಯ್‌ ಜೋಶಿಯನ್ನು ಪೊಲೀಸರು ಪುಣೆಯಲ್ಲಿ ವಶಕ್ಕೆ (Arrest) ಪಡೆದಿದ್ದಾರೆ. ಎಸಿಪಿ ಚಂದನ್​ ಅವರ ನೇತೃತ್ವದಲ್ಲಿ ಗೋಪಾಲ್​ ಜೋಶಿ ಅವರ ಮನೆಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದು, ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.

ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳಿಂದ ತಿಳಿದು ಬಂದಿದ್ದು, ಈ ಬಗ್ಗೆ ಇನ್ನಷ್ಟೇ ಖಚಿತವಾಗಬೇಕಿದೆ. ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ (Gopal Joshi) ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಗೋಪಾಲ್ ಜೋಶಿ ಪುಣೆಯಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ (Arrest) ಯಶಸ್ವಿಯಾಗಿದ್ದಾರೆ.

ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್​ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪೊಲೀಸರು ಆರೋಪಿಗಳನ್ನು ಬೆಂಗಳೂರಿಗೆ ಕರೆತರಲು ಸಿದ್ಧತೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net