ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಟ್ಯಾಂಕರ್​-ಕಾರು ಡಿಕ್ಕಿ

Car Accident
Published on

ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ.

ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಸಚಿವೆ ಹಾಗೂ ಕಾರು ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.

ವಿಜಯಪುರ ನಗರದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದ ಪರಿಣಾಮ‌ ಎನ್ಎಚ್ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net