More

    ‘ನನ್ನನ್ನು ಕ್ಷಮಿಸಿ, ನನ್ನ ಮಾತುಗಳನ್ನು ವಾಪಸ್​ ತೆಗೆದುಕೊಳ್ಳುತ್ತಿದ್ದೇನೆ’ : ಶೋಭಾ ಕರಂದ್ಲಾಜೆ

    ಬೆಂಗಳೂರು: ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್‌ ಎರಚಿದ್ದ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅದಕ್ಕಾಗಿ ಸಚಿವೆ ತನ್ನ ಹೇಳಿಕೆ ಹಿಂಪಡೆಯುತ್ತಿರುವುದಾಗಿ ಸಾಮಾಜಿಕ ಮಾಧ್ಯಮದ ತಮ್ಮ ಖಾತೆಯಲಗಲಿ ಪೋಸ್ಟ್​ ಹಾಕಿದ್ದಾರೆ.

    ಇದನ್ನೂ ಓದಿ: ಡಿಎಂಕೆ – ಕಾಂಗ್ರೆಸ್​ ಸೀಟು ಹೊಂದಾಣಿಕೆ ಫೈನಲ್​..39 ಕ್ಷೇತ್ರಗಳಲ್ಲಿ 9ಕಡೆ ‘ಕೈ’ ಸ್ಪರ್ಧೆ!

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇರಿಸಿದ್ದ ಆರೋಪಿಯು ಮಲೆನಾಡು ನಿವಾಸಿಯಾಗಿದ್ದು, ಈ ಹಿಂದೆ ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ತರಬೇತಿ ಪಡೆದುಕೊಂಡಿದ್ದಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

    ಆದರೆ ಸಚಿವೆ ಶೋಭಾ ನೀಡಿದ ಹೇಳಿಕೆ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರ್ನಾಟಕ, ತಮಿಳುನಾಡು ಜನರನ್ನು ವಿಭಜಿಸುವ ರಾಜಕಾರಣ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಸಚಿವೆ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಅವರು ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆಯಾಚಿಸಿದ್ದಾರೆ.

    “ನಾನು ಮಾಡಿರುವ ಕಾಮೆಂಟ್‌ಗಳು ಯಾವುದೇ ಒಂದು ಗುಂಪನ್ನು ಗುರಿಯಾಗಿರಿಸಿಕೊಂಡಿಲ್ಲ ಎಂದು ತಮಿಳುನಾಡಿನ ಜನರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಕೃಷ್ಣಗಿರಿಯಲ್ಲಿ ತರಬೇತಿ ಪಡೆದ ಆರೋಪಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ. ಆದರೆ ನನ್ನ ಮಾತುಗಳು ಕೆಲವರಿಗೆ ನೋವುಂಟು ಮಾಡಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ. ನನ್ನ ಕಾಮೆಂಟ್‌ಗಳನ್ನು ನಾನು ಹಿಂಪಡೆಯುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು.

    ವಿದೇಶಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts