More

    ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈ ನಗರ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

    ಇದನ್ನೂ ಓದಿ: ಅದ್ದೂರಿಯಾಗಿ ಸೆಟ್ಟೇರಿತು ಮೆಗಾಪವರ್ ಸ್ಟಾರ್​ ಪ್ಯಾನ್ ಇಂಡಿಯಾ ಸಿನಿಮಾ! ಚರಣ್ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ?

    ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ‘ಎಕ್ಸ್’ ನಲ್ಲಿ ಪೋಸ್ಟ್ ಹಾಕಿದ್ದರು. ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

    ದ್ವೇಷದ ಭಾಷಣವನ್ನು ಗಮನಿಸಬೇಕು ಮತ್ತು ತಕ್ಷಣವೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ತಮಿಳುನಾಡು ಸಿಎಂ ಒತ್ತಾಯಿಸಿದ್ದರು. ತಮ್ಮ ಪಕ್ಷದ ಪ್ರತಿಯೊಬ್ಬರೂ ಕೊಳಕು ಮತ್ತು ವಿಭಜಕ ರಾಜಕೀಯದಲ್ಲಿ ತೊಡಗುವುದನ್ನು ನಿಲ್ಲಿಸಬೇಕೆಂದು ಮೋದಿ ಅವರಿಗೆ ಸಿಎಂ ಸ್ಟಾಲಿನ್ ಒತ್ತಾಯಿಸಿದ್ದರು.

    ಈ ಸಂಬಂಧ ಮಧುರೈನ ಕಡಚನೆಂತಲ್‌ನ ಸಿ ತ್ಯಾಗರಾಜನ್ ಅವರು, ಕೇಂದ್ರ ಸಚಿವೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಅಧಿಕಾರಿಗಳು ಇನ್ನೂ ತನಿಖೆ ನಡೆಸುತ್ತಿರುವ ಸಮಯದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ತಮಿಳು ಮತ್ತು ಕನ್ನಡಿಗರ ನಡುವೆ ದ್ವೇಷ ಮತ್ತು ಅಸಮಾಧಾನ ಉಂಟುಮಾಡುತ್ತದೆ ಎಂದು ದೂರುದಾರರು ಟೀಕಿಸಿದ್ದಾರೆ. ದೂರಿನ ಆಧಾರದ ಮೇಲೆ ಮಧುರೈ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು, ಕೇಂದ್ರ ಸಚಿವೆ ವಿರುದ್ಧ ಐಪಿಸಿ ಸೆಕ್ಷನ್ 153, 153 ಎ, 505 (1) (ಬಿ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.‘

    ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ: ನಗರದ ರಾಮೇಶ್ವರಂ ಕೆಫೆಯ್ಲಲಿ ನಡೆದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿಗೂ ಸಂಬಂಧವಿದೆ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆ ಯಾಚಿಸಿದ್ದಾರೆ. ಮಾತ್ರವಲ್ಲದೆ ನನ್ನ ಮಾತುಗಳನ್ನು ಹಿಂಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಯೊಂದರಲ್ಲಿ ಮಾತನಾಡುವ ವೇಳೆ ಅವರು ನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರ ಎಂದು ಹೇಳಿಕೆ ನೀಡಿದ್ದರು.

    ಅದ್ದೂರಿಯಾಗಿ ಸೆಟ್ಟೇರಿತು ಮೆಗಾಪವರ್ ಸ್ಟಾರ್​ ಪ್ಯಾನ್ ಇಂಡಿಯಾ ಸಿನಿಮಾ! ಚರಣ್ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts