

ನವದೆಹಲಿ: ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಮ್ಮ ಕುಟುಂಬದೊಂದಿಗೆ ಹೋಳಿ ಹಬ್ಬ ಆಚರಿಸಿಕೊಂಡಿದ್ದಾರೆ.
ಸಚಿವೆ ಸ್ಮೃತಿ ಇರಾನಿ, ಪತಿ ಜುಬಿನ್ ಇರಾನಿ ಹಾಗೂ ಮಗಳು ಜೊಯಿಸ್ ಹೋಳಿ ಹಬ್ಬ ಆಚರಿಸಿಕೊಂಡ ಸೆಲ್ಫಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದ್ದಾರೆ.
ಕರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಚರಣೆಯಲ್ಲಿ ಭಾಗಿಯಾಗಿವುದಿಲ್ಲ ಎಂದು ಘೋಷಿಸಿಕೊಂಡಿದ್ದರು. ಅವರ ಸಂಪುಟದ ಸಹೋದ್ಯೋಗಿಗಳು ಕೂಡ ಸಾರ್ವಜನಿಕವಾಗಿ ಹೋಳಿ ಆಚರಣೆಯಲ್ಲಿ ಪಾಲ್ಗೊಳ್ಳದೆ ಮನೆಯಲ್ಲಿ ಕುಟುಂಬ ಸಮೇತ ಆಚರಿಸಿಕೊಂಡಿದ್ದಾರೆ. ಅದೇ ರೀತಿ ಸ್ಮೃತಿ ಇರಾನಿ ಕೂಡ ಆಚರಣೆ ಮಾಡಿಕೊಂಡಿದ್ದಾರೆ. ಮಗಳು ಹಾಗೂ ಪತಿಗೆ ಬಣ್ಣ ಹಚ್ಚಿ ಅದರ ಪೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಅಭಿಮಾನಿಗಳು ಪೋಟೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)