ಕೇಂದ್ರ ಸಚಿವ ಸುರೇಶ್​ ಅಂಗಡಿಯವರಿಗೆ ಕೊವಿಡ್​​-19 ಸೋಂಕು

Suresh Angadi
Published on

ಬೆಂಗಳೂರು: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿಯವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇಂದು ಟ್ವೀಟ್ ಮಾಡಿರುವ ಸುರೇಶ್ ಅಂಗಡಿಯವರು, ನಾನು ಕೊವಿಡ್​-19 ತಪಾಸಣೆಗೆ ಒಳಗಾಗಿದ್ದೇನೆ. ನನಗೆ ರೋಗದ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವವರು ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಮಂತ್ರಿ ಕಚೇರಿಯನ್ನೂ ಟ್ಯಾಗ್​ ಮಾಡಿದ್ದಾರೆ. ಇದನ್ನೂ ಓದಿ: ಬಿಕ್ಕಟ್ಟು ಶಮನಕ್ಕೆ ಭಾರತ-ಚೀನಾ ಮಾತುಕತೆ: ಐದು ಅಂಶಗಳ ಒಪ್ಪಂದ

ಇತ್ತೀಚೆಗೆ ಹಲವು ರಾಜಕಾರಣಿಗಳು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಹೆಚ್ಚಿನವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದು, ಇನ್ನೂ ಕೆಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net