More

    ಕಚೇರಿಗಳಿಗೆ ಮರಳಿದ ಕೇಂದ್ರ ಸಚಿವರು, ಅಧಿಕಾರಿಗಳು, ಹಂತಹಂತವಾಗಿ ಲಾಕ್​ಡೌನ್​ ತೆರವುಗೊಳಿಸುವ ಸೂಚನೆ

    ನವದೆಹಲಿ: ರಾಷ್ಟ್ರಾದ್ಯಂತ ಏ.14ರವರೆಗೆ ಜಾರಿಗೊಳಿಸಲಾಗಿರುವ ಮೊದಲ ಹಂತದ ಲಾಕ್​ಡೌನ್​ ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅದಾಗಲೇ ಏಪ್ರಿಲ್​ 30ರವರೆಗೆ ಎರಡನೇ ಹಂತದ ಲಾಕ್​ಡೌನ್​ ವಿಸ್ತರಣೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ, ಎರಡನೇ ಹಂತದಲ್ಲಿ ಒಂದಷ್ಟು ವಿನಾಯ್ತಿಗಳನ್ನು ನೀಡಿ, ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಲಕ್ಷಣಗಳು ಕಂಡುಬರುತ್ತಿವೆ.

    ಹೀಗಿರುವಂತೆ ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸೋಮವಾರ ತಮ್ಮ ಕಚೇರಿಗಳಿಗೆ ಬಂದು, ಅಲ್ಲಿಂದಲೇ ಕಾರ್ಯನಿರ್ವಹಿಸಲು ಆರಂಭಿಸಿದ್ದಾರೆ. ಇದರಿಂದಾಗಿ, 2ನೇ ಹಂತದ ಲಾಕ್​ಡೌನ್​ನಲ್ಲಿ ಕೆಲವೊಂದು ವಿನಾಯ್ತಿಗಳನ್ನು ನೀಡುವ ಸಾಧ್ಯತೆ ದಟ್ಟವಾಗಿದೆ.

    ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜ್ಜಿಜು ಸೋಮವಾರ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್​ಎಐ) ಕೇಂದ್ರ ಕಚೇರಿಗೆ ಸೋಮವಾರ ಭೇಟಿ ನೀಡಿದ್ದರು. ಮಾಸ್ಕ್​ ಧರಿಸಿದ್ದ ಅವರು, ಸಾಯ್​ ಕೇಂದ್ರವನ್ನು ಪ್ರವೇಶಿಸುವ ಮುನ್ನ ಸ್ಯಾನಿಟೈಸರ್​ನಲ್ಲಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡರು.
    ಕನಿಷ್ಠ ಸಿಬ್ಬಂದಿಯೊಂದಿಗೆ ಕ್ರೀಡಾ ಇಲಾಖೆ ಕಾರ್ಯನಿರ್ವಹಣೆ ಆರಂಭಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್​ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದೇವೆ. ಜತೆಗೆ ದೇಹದ ತಾಪಮಾನ ಪರೀಕ್ಷೆಯನ್ನೂ ಕಡ್ಡಾಯಗೊಳಿಸಲಾಗಿದೆ ಎಂದು ರಿಜ್ಜಿಜು ಸುದ್ದಿಗಾರರಿಗೆ ತಿಳಿಸಿದರು.

    ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಮತ್ತು ಮೂರನೇ ಒಂದು ಭಾಗದಷ್ಟು ಅಗತ್ಯ ಸಿಬ್ಬಂದಿಯೊಂದಿಗೆ ಸೋಮವಾರದಿಂದ ಕಚೇರಿಗಳಿಂದಲೇ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರ ತನ್ನೆಲ್ಲ ಸಚಿವರಿಗೆ ಸೂಚಿಸಿತ್ತು.

    ಲಾಕ್​ಡೌನ್​ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, 10 ಗ್ರಾಂಗೆ 45,600 ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts