17.8 C
Bengaluru
Wednesday, January 22, 2020

ಸಂವಿಧಾನದ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದ ಬಾಬಾ ಸಾಹೇಬ್

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ರಾಮನಗರ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಬದುಕಿನ ಭಾಗವಾಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಅಂಬೇಡ್ಕರ್ ಅವರ 63ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹುಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಹೊಂದಿರುವ ಭಾರತದಂತಹ ಬೃಹತ್ ದೇಶಕ್ಕೆ ಅಂಬೇಡ್ಕರ್ ಅವರು ವಿಶ್ವವೇ ಒಪ್ಪುವ ಶ್ರೇಷ್ಠ ಸಂವಿಧಾನವನ್ನು ನೀಡಿ ಎಲ್ಲರೂ ಒಗ್ಗೂಡಿ ಬಾಳ್ವೆ ಮಾಡುವ ಮಂತ್ರವನ್ನು ಪಠಿಸಿ ಹೋದರು. ಈ ಹಿನ್ನೆಲೆಯಲ್ಲಿ ನಾವು ಅಂಬೇಡ್ಕರ್‌ರಿಗೆ ಗೌರವ ನೀಡುವುದೇ ಆದರೆ, ಅವರ ಆಶಯದಂತೆ ನಡೆದುಕೊಳ್ಳಬೇಕು ಮತ್ತು ಕಾರ್ಯನಿರ್ವಹಿಸಬೇಕು ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣಗೌಡ ಮಾತನಾಡಿ, ತಾಂತ್ರಿಕ ಸೌಲಭ್ಯಗಳು ಹಾಗೂ ಕಂಪ್ಯೂಟರ್ ಬಳಕೆ ಇಲ್ಲದ ಕಾಲದಲ್ಲಿ ಸಂವಿಧಾನವನ್ನು ಡಾ. ಬಿ.ಆರ್ ಅಂಬೇಡ್ಕರ್ ರಚಿಸಿದರು. ಅವರ ಜ್ಞಾನ ಮತ್ತು ಶ್ರಮ ಶ್ಲಾಘನೀಯ ಎಂದರು. ಸರ್ಕಾರದ ಆದೇಶ, ಕಾಯ್ದೆ, ಸುತ್ತೋಲೆ ಯಾವುದೇ ಇರಲಿ ಮೂಲವನ್ನು ಹುಡುಕುತ್ತಾ ಹೋದರೆ ಅದರ ಮೂಲ ಸಂವಿಧಾನದಲ್ಲಿ ದೊರೆಯುತ್ತದೆ. ಸಂವಿಧಾನವನ್ನು ಸಾರ್ವಕಾಲಿಕವಾಗಿ ಸರ್ವರೂ ಒಪ್ಪುವಂತೆ ರಚಿಸಲಾಗಿದೆ ಎಂದರು.

ನ್ಯಾಯಾಲಯದಲ್ಲಿ ನೀಡಲಾಗುವ ತೀರ್ಪುಗಳಲ್ಲಿ ಸಂವಿಧಾನದ ಆಶಯಗಳ ಉಲ್ಲೇಖವಿರುತ್ತದೆ. ದೇಶ, ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಯಲ್ಲೂ ಸಂವಿಧಾನದ ಕೊಡುಗೆ ಇದೆ. ಸಂವಿಧಾನದಲ್ಲಿ ಆಶಯಗಳನ್ನು ಪಾಲಿಸಲು ಎಲ್ಲರೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಜಿಪಂ ಸಿಇಒ ಇಕ್ರಂ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಉಪವಿಭಾಗಾಧಿಕಾರಿ ದಾಕ್ಷಾಯಿಣಿ, ಮುಖಂಡರಾದ ಚನ್ನಕೇಶವ, ಶಿವಲಿಂಗಯ್ಯ, ಸೋಮಶೇಖರ್, ಕೇಶವ ಮೂರ್ತಿ, ಚಲುವರಾಜು, ಗೋವಿಂದರಾಜು, ಚಕ್ಕಲೂರು ಚೌಡಯ್ಯ, ಹರೀಶ್ ಬಾಲು, ಪ್ರಸನ್ನ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...