Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದರೇ ಸಿದ್ದು?

Thursday, 19.07.2018, 10:34 AM       No Comments

ಬೆಂಗಳೂರು: 16 ವಿವಿಗಳ ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯರ ವಾಪಸ್ಸಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಎಚ್‌ಡಿಕೆ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನಲಾಗಿದೆ.

ದೋಸ್ತಿ ಸರ್ಕಾರ ಮೈತ್ರಿ ಧರ್ಮವನ್ನು ಪಾಲಿಸುತ್ತಿಲ್ಲ. ಈ ಪ್ರಕರಣವನ್ನು ನಾನು ಸುಮ್ಮನೆ ಬಿಡುವುದಿಲ್ಲ. ಇದರಲ್ಲಿ ನಮ್ಮ ಪಕ್ಷದ ಕೆಲವರ ಕೈವಾಡವಿದೆ ಎಂದು ಗೊತ್ತಿದೆ ಎಂದು ಸಿದ್ದು ಗರಂ ಆಗಿದ್ದಾರೆ ಎನ್ನಲಾಗಿದೆ.

ವಿವಿಗಳ ಕೆಲ ಸಿಂಡಿಕೇಟ್ ಸದಸ್ಯರ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಚರ್ಚೆ ನಡೆಸಿದ್ದು, ಸಿಂಡಿಕೇಟ್ ನಾಮನಿರ್ದೇಶಿತ ಸದಸ್ಯರ ವಾಪಸ್ಸಾತಿ ವಿಚಾರಕ್ಕೆ ಕೆಂಡಾ‌ಮಂಡಲವಾಗಿದ್ದಾರೆ.

ಇನ್ನು ನಿನ್ನೆಯಷ್ಟೆ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು, ಹೊಸ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ವಿಶ್ವವಿದ್ಯಾಲಯಗಳ ಎಲ್ಲ ಸಿಂಡಿಕೇಟ್​ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ. ಆದರೆ, ಶೀಘ್ರ ಹೊಸ ಸದಸ್ಯರ ನೇಮಕವಾಗಲಿದೆ ಎಂದು ತಿಳಿಸಿದ್ದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top