More

    ಶಿಕ್ಷಣ ಸಂಸ್ಥೆಗಳಿಗೆ ಕೋರ್ಸ್ ನಡೆಸಲು ಅವಕಾಶ

    ಹುಬ್ಬಳ್ಳಿ: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳಿಗೆ ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್​ಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿವಿಯ ಕುಲಪತಿ ಪ್ರೊ. ನಾಗೇಶ ಬೆಟ್ಟಕೋಟೆ ತಿಳಿಸಿದರು.

    ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿಯಾಗಿ ಕೋರ್ಸ್​ಗಳನ್ನು ನಡೆಸಲು ಅನುವಾಗುವಂತೆ ರೂಪಿಸಲಾದ ವಿವಿಯ ನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರೆತು ಈಗಾಗಲೇ 7 ಶಿಕ್ಷಣ ಸಂಸ್ಥೆಗಳು ವಿವಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಕೋರ್ಸ್​ಗಳನ್ನು ಆರಂಭಿಸಿವೆ ಎಂದು ಹೇಳಿದರು.

    ವಿವಿ ಯು ಮೈಸೂರಿಗೆ ಸೀಮಿತವಾಗಿರುವುದು ಹಾಗೂ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿರುವುದನ್ನು ಮನಗಂಡು ಈ ಬದಲಾವಣೆ ಮಾಡಲಾಗಿದೆ. ನೋಂದಾಯಿತ ಶಿಕ್ಷಣ ಸಂಸ್ಥೆಗಳು ಕನಿಷ್ಠ 20 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕಾಗುತ್ತದೆ. ಯಾವುದೇ ಪ್ರಕಾರಗಳಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್​ಗಳನ್ನು ನಡೆಸಬಹುದು. ಪ್ರಸಕ್ತ ಸಾಲಿನಲ್ಲಿ ಒಡಂಬಡಿಕೆ ಮಾಡಿಕೊಳ್ಳಲು ಜುಲೈ 30ರವರೆಗೆ ಅವಕಾಶವಿರುತ್ತದೆ ಎಂದರು.

    ರಾಜ್ಯ ಸರ್ಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿದ್ದ ಸಂಗೀತ ಪರೀಕ್ಷೆ ಹಾಗೂ ಪ್ರದರ್ಶಕ ಕಲೆಗಳ ನೃತ್ಯ ಮತ್ತು ತಾಳ ವಾದ್ಯಗಳಲ್ಲಿ ಜೂನಿಯರ್, ಸೀನಿಯರ್ ಮತ್ತು ವಿದ್ವತ್ ಪರೀಕ್ಷೆಗಳನ್ನು ನಡೆಸುವ ಮತ್ತು ಪ್ರಮಾಣ ಪತ್ರಗಳನ್ನು ನೀಡುವ ಜವಾಬ್ದಾರಿಯನ್ನು ವಿಶ್ವವಿದ್ಯಾಲಯಕ್ಕೆ ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts