ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜರುಗಿದ ವಿ.ವಿ.ಯ 42ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ರ್ಗುಲಬರ್ಗಾ ವಿ.ವಿ. ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯದಲ್ಲಿನ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ಈಗಾಗಲೆ ರಾಜ್ಯಪಾಲರು ಅನುಮೋದನೆ ನೀಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಒಪ್ಪಿಗೆ ಸೂಚಿಸಿದ್ದು, ಕೂಡಲೆ ಪ್ರಸ್ತಾವನೆ ಸಲ್ಲಿಸುವಂತೆ ವಿ.ವಿ. ಕುಲಪತಿಗಳಿಗೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ವಿಶ್ವವಿದ್ಯಾಲಯಗಳ ಸಮಗ್ರ ಅಭಿವೃದ್ಧಿಗೆ ಕೆ.ಕೆ.ಆರ್.ಡಿ.ಬಿ. ಮಂಡಳಿಯು ಶೇ.10ರಷ್ಟು ಅನುದಾನ ಮೀಸಲಿರಿಸಬೇಕೆಂದು ಆದೇಶಿಸಿದ್ದು ಸ್ವಾಗತಾರ್ಹ ಎಂದಿರುವ ಅವರು, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಸ್ಥಾಪನೆಗೆ 10 ಎಕರೆ ಮತ್ತು ಮಲ್ಟಿ ಡಿಸಿಪ್ಲನರಿ ಸೆಂಟರ್ ಸ್ಥಾಪನೆಗೆ 25 ಎಕರೆ ಜಮೀನು ಗುಲಬರ್ಗಾ ವಿ.ವಿ.ಯಿಂದ ನೀಡಲಾಗುತ್ತಿದೆ. ಇದರಿಂದ ವಿ.ವಿ. ವಿದ್ಯಾರ್ಥಿಗಳಿಗೆ ದೊಡ್ಡ ಪ್ರಯೋಜನವಾಗಲಿದೆ ಎಂದರು.