ರಾಜಧಾನಿಯಲ್ಲೇ ಪತ್ತೆಯಾಯ್ತು ಮಹಿಳೆಯ ಸುಟ್ಟು ಕರಕಲಾದ ದೇಹ!; ಇನ್ನೂ ಪತ್ತೆಯಾಗದ ಗುರುತು..

Pub crime
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಹಿಳೆಯೊಬ್ಬರ ಸುಟ್ಟು ಕರಕಲಾದ ದೇಹ ಪತ್ತೆಯಾಗಿದ್ದು, ಸುತ್ತಮುತ್ತಲ ಪರಿಸರದಲ್ಲಿ ಆತಂಕವನ್ನು ಮೂಡಿಸಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಶವ ಕಂಡುಬಂದಿದೆ.

ಕೆಂಗೇರಿಯ ರಾಮಸಂದ್ರ ಎಂಬಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ದೇಹ ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿದೆ. ಸಾವಿಗೀಡಾಗಿರುವ ಮಹಿಳೆಯ ವಯಸ್ಸು ಸುಮಾರು 25ರಿಂದ 30 ವರ್ಷಗಳಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಹುಶಃ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕಿರಬಹುದು ಎಂದು ಅಂದಾಜಿಸಲಾಗಿದೆ. ಅತ್ಯಾಚಾರ ಮತ್ತು ಕೊಲೆ ಕೂಡ ಆಗಿರಬಹುದು ಎಂಬ ಶಂಕೆ ಮೂಡಿದೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net