ವಾಕಿಂಗ್​ ಮಾಡುವಾಗ ಅಪರಿಚಿತ ಶವ ಕಂಡು ಬೆಚ್ಚಿಬಿದ್ದ ಜನ!

police
Published on

ದೇವನಹಳ್ಳಿ: ಜನರು ಕೆರೆ ಪಕ್ಕದಲ್ಲಿ ವಾಯುವಿಹಾರಕ್ಕೆ ಎಂದು ವಾಕಿಂಗ್​ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಕಂಡ ಜನರು ದಂಗಾಗಿದ್ದಾರೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ನಡೆದದ್ದು ದೊಡ್ಡಬಳ್ಳಾಪುರ ನಗರದ ನಾಗರಕೆರೆಯ ಬಳಿಯಲ್ಲಿ. ಕೆರೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿದ್ದನ್ನು ನೋಡಿದ ಸ್ಥಳಿಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ದೊಡ್ಡಬಳ್ಳಾಪುರ ನಗರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದೊಂದಿಗೆ ಮೃತ ದೇಹವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ.

ಸದ್ಯ ಮೃತನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net