25.5 C
Bangalore
Monday, December 16, 2019

ಉನ್ನಾವೋ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಟ್ವಿಸ್ಟ್​: ಅಪಘಾತದಲ್ಲಿ ಸಂತ್ರಸ್ತೆಗೆ ಗಂಭೀರ ಗಾಯ, ಆಕೆಯ ವಕೀಲ, ಪ್ರಮುಖ ಸಾಕ್ಷಿ ಸಾವು

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌ: ಉನ್ನವೋ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರಿ ತಿರುವು ಪಡೆದುಕೊಂಡಿದ್ದು, ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಹಾಗೂ ಪ್ರಮುಖ ಸಾಕ್ಷಿಯೊಬ್ಬರು ಸಾವಿಗೀಡಾಗಿದ್ದಾರೆ. ಬಿಜೆಪಿ ಶಾಸಕ ಕುಲದೀಪ್​ ಸಿಂಗ್​ ಸೆಂಗಾರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅಪಘಾತ ಭಾರಿ ಅನುಮಾನಕ್ಕೆ ಈಡುಮಾಡಿದೆ.​

- Advertisement -

ಉತ್ತರ ಪ್ರದೇಶದ ಉನ್ನಾವೋ ಮತ್ತು ಲಾಲ್​ಗಂಜ್​ ವಿಭಾಗದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 232ರಲ್ಲಿ ಅಪಘಾತ ಸಂಭವಿಸಿದೆ. ಟ್ರಕ್​ ಒಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಕೀಲ ಹಾಗೂ ಪ್ರಮುಖ ಸಾಕ್ಷಿ ಮೃತರಾಗಿದ್ದಾರೆ. ಸಂತ್ರಸ್ತೆ ತಾಯಿಯ ಸ್ಥಿತಿಯು ಗಂಭೀರವಾಗಿದ್ದು ಲಖನೌದ ಟ್ರಾಮ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಂತ್ರಸ್ತೆಗೂ ಕೂಡ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಉನ್ನೋವೋ ಅತ್ಯಾಚಾರ ಸಂತ್ರಸ್ತೆ, ಆಕೆಯ ಪರ ವಕೀಲ ಮಹೇಂದ್ರ ಸಿಂಗ್​, ತಾಯಿ ಮತ್ತು ಆಕೆಯ ಆಂಟಿ ರಾಯ್​ಬರೇಲಿ ಜೈಲಿನಲ್ಲಿರುವ ಅಂಕಲ್​ ಮಹೇಶ್​ ಸಿಂಗ್​ರನ್ನು ಭೇಟಿ ಮಾಡಲು ಕಾರಿನಲ್ಲಿ ತೆರಳುವಾಗ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಶಾಸಕ ಕುಲದೀಪ್​ ಸಿಂಗ್ ಸೆಂಗಾರ್​​​ ಮತ್ತು ಆತನಿಗೆ ಒತ್ತಾಸೆಯಾಗಿ ನಿಂತಿದ್ದ ಶಶಿ ಸಿಂಗ್​ ಹೆಸರನ್ನು ಉಲ್ಲೇಖಿಸಿದ್ದಳು. ಜುಲೈ 18ರಂದು ಆರೋಪಿ ಶಶಿ ಸಿಂಗ್​ಗೆ ಅಲಹಬಾದ್​ ಹೈಕೋರ್ಟ್​​ ಜಾಮೀನು ನಿರಾಕರಿಸಿತ್ತು. ಇದಾದ ಎರಡೇ ವಾರದಲ್ಲಿ ಈ ಅಪಘಾತ ಸಂಭವಿಸಿದೆ.

ಅತ್ಯಾಚಾರ ನಡೆದ ಸಮಯದಲ್ಲಿ ಶಾಸಕ ಕುಲದೀಪ್​ ಸಿಂಗ್​ ಘಟನೆ ನಡೆದ ಸ್ಥಳದಿಂದ 50 ಕಿ.ಮೀ ದೂರದಲ್ಲಿದ್ದರು. ಅಲ್ಲದೆ, ಶಶಿ ಸಿಂಗ್​ ಕೂಡ ಅಲ್ಲಿಯೇ ಇದ್ದರು ಎಂಬುದು ಕೂಡ ಸಾಬೀತಾಗಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಕೆಂದು ಆರೋಪಿ ಶಶಿ ಸಿಂಗ್​ ಪರ ವಕೀಲ ವಕಾಲತ್ತು ವಹಿಸಿದ್ದರು. ಆದರೆ, ಇದನ್ನು ವಿರೋಧಿಸಿ ಸಿಬಿಐ ದಾಖಲಿಸಿದ್ದ ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಶಶಿ ಸಿಂಗ್​ಗೆ ಜಾಮೀನು ನಿರಾಕರಣೆ ಆಗಿತ್ತು.

ಅತ್ಯಾಚಾರ ಸಂತ್ರಸ್ತೆ ತನ್ನ ಮೇಲಿನ ಕ್ರೌರ್ಯವನ್ನು ವಿರೋಧಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್​ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದಾಗ ಪ್ರಕರಣ ಬೆಳಕಿಗೆ ಬಂದು ಸುದ್ದಿ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಶಾಸಕ ಕುಲದೀಪ್​ ವಿರುದ್ಧ ಸಂತ್ರಸ್ತೆ ಆರೋಪಿಸಿ, ನ್ಯಾಯಕ್ಕಾಗಿ ಅಂಗಲಾಚಿದ್ದಳು. ಉತ್ತರ ಪ್ರದೇಶದ ಬ್ಯಾಂಗರ್ಮೌ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ಆರೋಪಿ ಸೆಂಗಾರ್​ನನ್ನು ಕಳೆದ ವರ್ಷ ಏಪ್ರಿಲ್​ 13ರಂದು ಬಂಧಿಸಲಾಗಿತ್ತು. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...