ಸಕಲೇಶಪುರ: ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ವೈ.ಪಿ.ರಾಜೇಗೌಡ ಹಾಗೂ ಉಪಾಧ್ಯಕ್ಷರಾಗಿ ವಳಲಹಳ್ಳಿ ವೀರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಬ್ಯಾಂಕ್ ಸಂಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿಯ ಅಧಿಕಾರಿ ಮಂಜುನಾಥ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಹೆಸರು ಘೋಷಿಸಿದರು.
ಚುನಾವಣೆಯ ನಂತರ ಮಾತನಾಡಿದ ವೈ.ಪಿ.ರಾಜೇಗೌಡ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಪಕ್ಷದ ನಾಯಕರ ಸಹಕಾರ ಪಡೆದು ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಈ ವೇಳೆ ಪಕ್ಷದ ಮುಖಂಡರಾದ ಮುರುಳಿಮೋಹನ್, ಬ್ಯಾಂಕ್ ನಿರ್ದೇಶಕರಾದ ಉದಯ್, ಜಯಣ್ಣ, ಹಿತೈಷಿ, ವಿಜಯ್‌ಕುಮಾರ್, ಪುರಸಭೆ ಸದಸ್ಯ ಅಶೋಕ್ ಕಡಗರವಳ್ಳಿ ಮುಂತಾದವರಿದ್ದರು.