ಸಿಂಧನೂರು: 6ನೇ ಗ್ಯಾರಂಟಿಯನ್ನು ಸಮರ್ಪಕವಾಗಿ ಜಾರಿಗೋಳಿಸಲು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ತಾಲೂಕು ಘಟಕ ಶನಿವಾರ ತಹಸಿಲ್ ಕಚೇರಿ ಶಿರಸ್ತೇದಾರೆ ವಾಣಿ ಶ್ರೀಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಚಾಲನೆ
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದುಗೊಳಿಸಬೇಕು. ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಕೇಸ್‌ಗಳನ್ನು ವಾಪಾಸ್ ಪಡೆಯಬೇಕು. ಕೆಲಸದ ಅವಧಿಯನ್ನು 12ಗಂಟೆ ವಿಸ್ತರಿಸಿರುವುದನ್ನು ರದ್ದುಗೊಳಿಸಿ, 8 ಗಂಟೆಗೆ ಮಿತಿಗೊಳಿಸಿ.
ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಲು ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸಬೇಕು. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಕಾಯಂಗೊಳಿಸವುದಕ್ಕೆ ಸೂಕ್ತ ಯೋಜನೆ ರೂಪಿಸಿ. ವರ್ಷಕ್ಕೆ 2500 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಉನ್ನತೀಕರಿಸಬೇಕು.
ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಬೋಧಕೇತರ ಹುದ್ದೆ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಬೇಕು.
ಮಂಗಳಮುಖಿಯರ ಸಮಸ್ಯೆಗಳಿಗೆ ಸ್ಪಂದಿಸಲು ಮಂಗಳಮುಖಿಯರ ಕಲ್ಯಾಣ ಮಂಡಳಿ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲಸೌಲಭ್ಯ ಯೋಜನೆ ಜಾರಿಗೊಳಿಸಬೇಕು ಈಗೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ಘಟಕ ಗೌರವಾಧ್ಯಕ್ಷ ಡಿ.ಎಚ್.ಕಂಬಳಿ, ಪ್ರಮುಖರಾದ ಯಮನಮ್ಮ, ಜಗದೀಶ, ಗಂಗಣ್ಣ, ಪ್ರಕಾಶ, ಸುಭಾನಸಾಬ, ಆದಪ್ಪ, ಹನುಮಂತಪ್ಪ, ಶಾಂತಮ್ಮ, ಅಮರೇಶ, ನಾಗಮ್ಮ, ಆದಪ್ಪ, ಬಿರಾದಾರ್, ಚನ್ನಪ್ಪ ಜವಳಗೇರಾ, ಸತ್ಯಮ್ಮ ಇದ್ದರು.