16 C
Bangalore
Saturday, December 7, 2019

ಅಪಘಾತ ತಾಣ ಅವೈಜ್ಞಾನಿಕ ರಸ್ತೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

<ಪುತ್ತೂರು- ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ನಿರಂತರ ಅಪಘಾತ >

5ಶ್ರವಣ್ ಕುಮಾರ್ ನಾಳ ಪುತ್ತೂರು

ಪುತ್ತೂರು- ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ನಿರಂತರ ಅಪಘಾತ ನಡೆಯುತ್ತಲೇ ಇದ್ದು, ಲೋಕೋಪಯೋಗಿ ಇಲಾಖೆ ಅವೈಜ್ಞಾನಿಕ ಕಾಮಗಾರಿಯೇ ಅಪಘಾತಕ್ಕೆ ಮೂಲ ಕಾರಣ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.

ಇತ್ತೀಚಿನ ಎರಡು ತಿಂಗಳಲ್ಲಿ ಇಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ಪ್ರತಿನಿತ್ಯ ಇಲ್ಲಿ ವಾಹನ ಸವಾರರು ಅಪಘಾತ ಭಯದಿಂದ ಸಂಚರಿಸುವ ವಾತಾವರಣ ಇದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗುವಂಥ ಗಂಭೀರ ಅಪಘಾತ ನಡೆಯುವ ಮೊದಲು ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಳ್ಳುವುದು ಅಗತ್ಯ.

ವಾಹನಗಳು ಕಾಣಿಸುವುದೇ ಇಲ್ಲ: ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಪುತ್ತೂರು ಕಡೆಯಿಂದ ಬರುವ ವಾಹನಗಳ ಸವಾರರಿಗೆ ಭಕ್ತಕೋಡಿ ಪಶು ಚಿಕಿತ್ಸಾಲಯ ಬಳಿ ಬಂದಾಗ ಸವಣೂರು ಕಡೆಯಿಂದ ಬರುವ ವಾಹನಗಳು ಕಾಣಿಸುವುದೇ ಇಲ್ಲ. ಸವಣೂರು ಕಡೆಯಿಂದ ಬರುವ ವಾಹನಗಳು ಪುತ್ತೂರು ಕಡೆಯಿಂದ ಬರುವ ವಾಹನಗಳಿಗೆ ಕಾಣಿಸುವುದಿಲ್ಲ. ಇಲ್ಲಿ ರಸ್ತೆ ನೇರವಾಗಿ ಇದ್ದರೂ 20 ಮೀಟರ್ ಅಂತರದಲ್ಲಿ ಎದುರು -ಬದುರು ಬರುವ ವಾಹನಗಳು ಕಾಣಿಸದಷ್ಟು ರಸ್ತೆ ಎತ್ತರವಾಗಿದ್ದು ಚಾಲಕರ ಅತಿಯಾದ ವೇಗ ಅಪಘಾತಕ್ಕೆ ಕಾರಣವಾಗುತ್ತವೆ. ಇದೇ ಸ್ಥಳದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದ್ದು ಮಕ್ಕಳು ರಸ್ತೆ ದಾಟಲು ಕೂಡ ಭಯಪಡುವಂತಾಗಿದೆ. ಪಾಲೆತ್ತಗುರಿ ಕಾಲನಿ ಹಾಗೂ ದೋಳ ರಸ್ತೆಗಳಿಗೆ ಇದೇ ಸ್ಥಳದಲ್ಲಿ ತಿರುವು ತೆಗೆದುಕೊಳ್ಳಬೇಕಾಗಿದ್ದು, ಮುಖ್ಯ ರಸ್ತೆಯಲ್ಲಿ ಅತಿ ವೇಗವಾಗಿ ಸಂಚರಿಸುವ ವಾಹನಗಳು ಅಪಘಾತಗಳಿಗೆ ಕಾರಣವಾಗುತ್ತಿವೆ. ಭಕ್ತಕೋಡಿ ಹಾಗೂ ಮಾಂತೂರು ಕಾಲನಿ ತಿರುವಿನ ಅವೈಜ್ಞಾನಿಕ ಕಾಮಗಾರಿಯಿಂದ ಮಾಂತೂರು ಅಂಬೇಡ್ಕರ್ ಭವನದ ಮುಂಭಾಗವೂ ಅಪಘಾತಗಳು ಸಂಭವಿಸುತ್ತಿವೆ.

ಪಿಡಬ್ಲುೃಡಿ ಕಾಮಗಾರಿ: ಅವೈಜ್ಞಾನಿಕ ಕಾಮಗಾರಿ ಪರಿಣಾಮ ಪುರುಷರಕಟ್ಟೆ ಹಾಗೂ ಗಡಿಪಿಲ ಎಂಬಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಇಲ್ಲಿ ರಸ್ತೆಗಳು ಎದುರು ಬದುರು ಬರುವ ವಾಹನಗಳು ಚಾಲಕರಿಗೆ ಕಾಣದಂತೆ ಇದ್ದು, ಅವೈಜ್ಞಾನಿಕ ಉಬ್ಬುಗಳನ್ನು ಸಮತಟ್ಟು ಮಾಡಿ ವಾಹನ ಸವಾರರಿಗೆ ಆಗುತ್ತಿದ್ದ ಸಮಸ್ಯೆಗಳನ್ನು ಲೋಕೋಪಯೋಗಿ ಇಲಾಖೆ ಕಳೆದ ವರ್ಷ ನಿವಾರಿಸಿತ್ತು. ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿನ ಅವೈಜ್ಞಾನಿಕ ರಸ್ತೆ ನಿರ್ಮಾಣ ನಿರಂತರ ವಾಹನ ಅಪಘಾತಗಳಿಗೆ ಕಾರಣವಾಗುತ್ತಿದ್ದು ಲೋಕೋಪಯೋಗಿ ಇಲಾಖೆ ತಕ್ಷಣ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪುತ್ತೂರು -ಸುಬ್ರಹ್ಮಣ್ಯ -ಮಂಜೇಶ್ವರ ರಾಜ್ಯ ಹೆದ್ದಾರಿ ಎಸ್.ಎಚ್ -100ರಲ್ಲಿ ನಡೆದ ರಸ್ತೆ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ಹೊಣೆ. ಯೋಜನೆಯಲ್ಲಿನ ಲೋಪದೋಷದಿಂದ ಇಂದು ಪ್ರತಿದಿನ ಈ ರಸ್ತೆಗಳಲ್ಲಿ ಅಪಘಾತ ಸಂಭವಿಸುತ್ತಿವೆ.
ಅಶೋಕ್ ಎಸ್.ಡಿ,
ಭಕ್ತಕೋಡಿ ಸರ್ಕಾರಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ

ಪುತ್ತೂರು -ಸುಬ್ರಹ್ಮಣ್ಯ -ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ನಿರಂತರ ಅಪಘಾತ ಸಂಭವಿಸುವುದನ್ನು ತಪ್ಪಿಸುವ ಸಲುವಾಗಿ ಈ ಹೆದ್ದಾರಿಯ ರಸ್ತೆ ರಚನೆಯಲ್ಲಿ ಬದಲಾವಣೆ ತರುವ ಹೊಸ ಯೋಜನಾ ಕಾಮಗಾರಿ ಮುಂದಿನ ದಿನಗಳಲ್ಲಿ ನಡೆಯಲಿದೆ. ಪ್ರಸ್ತುತ ಯೋಜನಾಪಟ್ಟಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಕೆಲವೇ ದಿನಗಳಲ್ಲಿ ಸರ್ಕಾರದಿಂದ ಅನುಮೋದನೆ ದೊರೆಯಲಿದೆ.
ಪ್ರಮೋದ್,
ಇಂಜಿನಿಯರ್ ಲೋಕೋಪಯೋಗಿ ಇಲಾಖೆ ಪುತ್ತೂರು

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...