More

  ನಟ ದರ್ಶನ್​ನಿಂದ ಚಿಕಿತ್ಸೆಗೆ ಸಿಗದ ಸಹಾಯ: ಹಲವು ವರ್ಷಗಳಿಂದ ಹಾಸಿಗೆ ಹಿಡಿದಿರುವ ಫಾರ್ಮ್​ಹೌಸ್ ಕೆಲಸಗಾರ

  ಚಾಮರಾಜನಗರ: ನಟ ದರ್ಶನ್​ಗೆ ಸೇರಿರುವ ತಿ.ನರಸೀಪುರದ ಫಾರ್ಮ್ ಹೌಸ್​ನಲ್ಲಿ‌ ಹತ್ತು ವರ್ಷಗಳ ಹಿಂದೆ ಕೆಲಸ ಮಾಡುವಾಗ ಗಾಯಗೊಂಡಿದ್ದನಿಗೆ ಚಿಕಿತ್ಸೆಗೆ ಸಹಾಯ ದೊರೆಯದೆ ಇಂದಿಗೂ‌ ಹಾಸಿಗೆ ಹಿಡಿದಿರುವ ಆರೋಪ ಕೇಳಿಬಂದಿದೆ.

  ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಗ್ರಾಮದ ಮಹೇಶ್(45) ಅನಾರೋಗ್ಯದಿಂದ ಬಳಲುತ್ತಿದ್ದಾರೆ.

  ಇವರ ಅಳಿಯ ನಂದೀಶ್ ಹೇಳುವುದೇನೆಂದರೆ, ನನ್ನ ಮಾವ ಮಹೇಶ್ ಕಳೆದ 10 ವರ್ಷಗಳ ಹಿಂದೆ ನಟ ದರ್ಶನ್ ಅವರ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹಸುವಿಗೆ ಲಾಳ ಹೊಡೆಯುವಾಗ ತಲೆ ಭಾಗಕ್ಕೆ ಒತ್ತಿತ್ತು. ಇದರಿಂದ ಒಂದು ಕಣ್ಣಿಗೂ ಪೆಟ್ಟು ಬಿದ್ದಿತ್ತು. ಆ ಸಂದರ್ಭದಲ್ಲಿ ದರ್ಶನ್ ಕಡೆಯವರು ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟವರು ಮರಳಿ ಹೇಗಿದ್ದಾರೆ ಎನ್ನುವುದನ್ನೂ ವಿಚಾರಿಸಿಲ್ಲ. ನನ್ನ ಮಾವ ಅಂದಿನಿಂದ ಈವರೆಗೂ ಹಾಸಿಗೆ ಹಿಡಿದಿದ್ದಾರೆ ಎಂದು ದೂರಿದ್ದಾರೆ.

  ಮಹೇಶ್ ಗಾಯಗೊಂಡು ಚಿಕಿತ್ಸೆ ಪಡೆದು ಮನೆಗೆ ಮರಳಿದ ಕೆಲವೇ ದಿನಗಳಲ್ಲಿ ಎಡಗೈ, ಎಡಗಾಲು ಸ್ವಾಧೀನ ಕಳೆದುಕೊಂಡಿತು. ತಲೆಗೆ ಪೆಟ್ಟಬಿದ್ದಿದ್ದರಿಂದ ಬಲಗಣ್ಣ ದೃಷ್ಡಿಯೂ ಹೋಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ದರ್ಶನ್ ಕಡೆಯವರು ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದರು. ಮುಂದಿನ ದಿನಗಳಲ್ಲಿ ಮಹೇಶ್ ಆರೋಗ್ಯಕ್ಕೆ ತೊಂದರೆಯಾದರೆ ಹಣಕಾಸು ಸಹಾಯ ಮಾಡುತ್ತೇವೆ. ಮಕ್ಕಳ ಮದುವೆಗೂ ನೆರವಾಗುತ್ತೇವೆ ಎಂದಿದ್ದರು. ಆದರೆ ದರ್ಶನ್ ಆಗಲಿ, ಅಥವಾ ಅವರ ಕಡೆಯವರಾಗಲಿ ಯಾರೂ ನಮ್ಮ ಕಡೆ ತಿರುಗಿಯೂ ನೋಡಲಿಲ್ಲ ಎಂದಿದ್ದಾರೆ.

  ಕೊಲೆ ಕೇಸ್​ನಲ್ಲಿ ದರ್ಶನ್​ ಅರೆಸ್ಟ್​!
  ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

  See also  ಚಿತ್ರ ಮಾಡೋದಕ್ಕೆ ಕಾಸರವಳ್ಳಿ ಅವರಿಗೆ ಅಂಜಿಕೆ ಯಾಕೆ?

  ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

  ಇನ್ಮುಂದೆ ನಾನು… ಕಣ್ಣೀರಾಕುತ್ತಲೇ ಆಪ್ತರ ಬಳಿ ನೋವು ತೋಡಿಕೊಂಡ ದರ್ಶನ್​ ಪತ್ನಿ ವಿಜಯಲಕ್ಷ್ಮೀ!

  ಈ ಒಂದು ವಿಚಾರ ದರ್ಶನ್​ ಕಿವಿಗೆ ಬೀಳಲೇಬಾರದಿತ್ತು! ಪೊಲೀಸ್​ ಕಸ್ಟಡಿಯಲ್ಲಿ ಕಣ್ಣೀರಿಡುತ್ತಿರುವ ಪವಿತ್ರಾ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts