More

    ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ

    ಬೆಂಗಳೂರು: ಮಾರ್ಚ್​ 01ರಂದು ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಿಚಾರಣೆಯನ್ನು ಚುರುಕುಗೊಳಿಸಿದ್ದು, ಎಲ್ಲಾ ಆಯಾಮಾದಲ್ಲೂ ತನಿಖೆ ನಡೆಸುತ್ತಿದೆ. ಘಟನೆ ನಡೆದು ತಿಂಗಳೂ ಕಳೆಯುತ್ತ ಬಂದರೂ ಆರೋಪಿಗಳು ಈವರೆಗೆ ಪತ್ತೆಯಾಗದಿರುವುದು ತನಿಖಾ ಸಂಸ್ಥೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ಎನ್ಐಎ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಭಾಗವಾಗಿ ದೇಶದ 18 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಬಾಂಬ್ ಇಟ್ಟ ಮುಸಾವೀರ್ ಹಾಗೂ ಇದಕ್ಕೆ ರೂಪುರೇಷೆ ಸಿದ್ದಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮಿಲ್ ಷರೀಫ್ ಎಂಬಾತನನ್ನು ಬಂಧನ ಮಾಡಲಾಗಿದೆ.

    ಇದನ್ನೂ ಓದಿ: ಸೋಲೋ ಪಂದ್ಯವನ್ನು ಗೆಲ್ಲಿಸಿದವನಿಗೆ ಕೃತಜ್ಞತೆ ತೋರದ ಪಂಜಾಬ್​ ಕಿಂಗ್ಸ್​

    ತನಿಖೆಯ ಭಾಗವಾಗಿ ಆರೋಪಿಗಳ ಸಂಬಂಧಿಕರು, ಸ್ನೇಹಿತರು, ಬಂಧಿತ ಆರೋಪಿಗಳು ಎಲ್ಲರ ವಿಚಾರಣೆ ನಡೆಯುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು ಎನ್​ಎಐ ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿದೆ.

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳಾದ ಅಬ್ದುಲ್​ ಮತೀನ್ ತಾಹ, ಮುಸಾವೀರ್​ ಪತ್ತೆಗೆ ಎನ್​ಐಎ ತಲೆ ಕೆಡಿಸಿಕೊಂಡಿದೆ. ಈಗಾಗಲೇ ಆರೋಪಿಗಳ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts