More

    ಲೈಂಗಿಕ ದೌರ್ಜನ್ಯ ಪ್ರಕರಣ; ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

    ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್​​ಗೆ ಒಂಬತ್ತು ವರ್ಷಗಳ ನಂತರ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ನಡೆದಿದ್ದೇನು?:  2014ರಲ್ಲಿ, ರಾಮದುಲರ್ ಗೊಂಡ್​​ ಪತ್ನಿ ಗ್ರಾಮ ಪಂಚಾಯಿತಿಯೊಂದರ ಮುಖ್ಯಸ್ಥರಾಗಿದ್ದರು. ಸ್ಥಳೀಯ ಪ್ರಬಲ ವ್ಯಕ್ತಿಯಾಗಿದ್ದ ಗೊಂಡನು ತನ್ನ ಹೆಂಡತಿಯ ಸ್ಥಾನವನ್ನು ಬಳಸಿಕೊಂಡು ರಾಜಕೀಯದಲ್ಲಿ ಕೆಲವು ಕೆಲಸ ಮಾಡಲು ಪ್ರಯತ್ನಿಸುತ್ತಿದ್ದನು. ಗೊಂಡ ಬಾಲಕಿಯ ಮೇಲೆ 2014 ನವೆಂಬರ್ 4 ರಂದು ಅತ್ಯಾಚಾರವೆಸಗಿದ್ದು, ಈ ಕುರಿತು ಮೈರ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    2014ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೋನ್‌ಭದ್ರಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಶಾಸಕ ರಾಮದುಲರ್ ಗೊಂಡ್‌ ಮೇಲೆ ಆರೋಪ ಕೇಳಿ ಬಂದಿತ್ತು. ಯುಪಿ ಪೊಲೀಸರು ಶಾಸಕ ಗೊಂಡು ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತಾಗಿ ಹಲವು ವರ್ಷಗಳಿಂದ ತನಿಖೆ ನಡೆಯುತ್ತಲೇ ಇತ್ತು.

    ಈ ಪ್ರಕರಣದ ವಿಚಾರಣೆ ಪೋಕ್ಸೊ ನ್ಯಾಯಾಲಯದಲ್ಲಿ ಆರಂಭವಾಗಿತ್ತು. ಕಳೆದ ವರ್ಷ ದುಡ್ಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಗೊಂಡ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. ನಂತರ ಈ ಪ್ರಕರಣವನ್ನು ಸೋನ್‌ಭದ್ರಾದಲ್ಲಿರುವ ಎಂಪಿ-ಎಂಎಲ್‌ಎ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

    ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯ ಪ್ರಕಾಶ್ ತ್ರಿಪಾಠಿ ಅವರು, “ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ ಹಾಗೂ ಅತ್ಯಾಚಾರ ಮತ್ತು ಭಾರತೀಯ ದಂಡ ಸಂಹಿತೆಯ ಸಾಕ್ಷ್ಯಗಳನ್ನು ನಾಶಪಡಿಸುವ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಶಾಸಕ ರಾಮದುಲಾರೆ ಗೊಂಡ್ ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಅಹ್ಸಾನ್ ಉಲ್ಲಾ ಖಾನ್ ತೀರ್ಪು ನೀಡಿದೆ.  2014ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೋನ್‌ಭದ್ರಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಶಾಸಕ ರಾಮದುಲರ್ ಗೊಂಡ್‌ಗೆ 25 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮೂಲಕ ನ್ಯಾಯಾಲಯವು ಶುಕ್ರವಾರ ಸಂವೇದನಾಶೀಲ ತೀರ್ಪು ನೀಡಿದೆ. ಈ ನ್ಯಾಯಾಲಯದ ತೀರ್ಪಿನೊಂದಿಗೆ ಉತ್ತರ ಪ್ರದೇಶ ವಿಧಾನಸಭೆಯಿಂದ ಶಾಸಕ ರಾಮ್ ದುಲಾರ್ ಅನರ್ಹತೆ ಮಾಡಲಾಗುತ್ತದೆ. ಅತ್ಯಾಚಾರ ಸಂತ್ರಸ್ತೆಗೆ 10 ಲಕ್ಷ ರೂಪಾಯಿ ದಂಡವನ್ನೂ ನೀಡುವಂತೆ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ.

    ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯ ಪ್ರಕಾಶ್ ತ್ರಿಪಾಠಿ ಮಾತನಾಡಿ, ಡಿಸೆಂಬರ್ 12 ರಂದು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ದುಡ್ಡಿ ವಿಧಾನಸಭಾ ಸ್ಥಾನವನ್ನು ಪ್ರತಿನಿಧಿಸುವ ಶಾಸಕರನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ ಎಂದಿದ್ದಾರೆ.

    ಅಯೋಧ್ಯೆ ರಾಮಮಂದಿರ ಗರ್ಭಗುಡಿಯಲ್ಲಿ ಮೊಳಗಲಿದೆ ಬೆಂಗಳೂರಿನಿಂದ ಕಳುಹಿಸಿದ ಘಂಟೆಗಳ ನಾದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts