More

    ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಯೋಗಿ ಎಂದು ಬಣ್ಣಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ..

    ನೆಲಮಂಗಲ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಯೋಗಿ ಎಂದು ಬಣ್ಣಿಸಿದ್ದಾರೆ. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕೇಂದ್ರ ನೆಲಮಂಗಲದಲ್ಲಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ‘ಕ್ಷೇಮವನ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

    ಕ್ಷೇಮವನದ ರೂಪದಲ್ಲಿ ಇಂದು ಭಾರತೀಯ ಪಾರಂಪರಿಕ ಚಿಕಿತ್ಸಾ ಪದ್ಧತಿ ಮುಂದುವರಿದಿದೆ. ಈ ರಾಜ್ಯದಲ್ಲಿನ ಮುಂದೆ ಬಜರಂಗ ಬಲಿ ಹನುಮಾನ್ ಬರುತ್ತಾನೆ, ಭಾರತದಲ್ಲಿ ರಾಮರಾಜ್ಯ ಸ್ಥಾಪನೆ ಆಗುತ್ತದೆ ಎಂಬುದಾಗಿ ಹೇಳಿದ ಯೋಗಿ ಆದಿತ್ಯನಾಥರು, ಬೊಮ್ಮಾಯಿಯವರು ಯೋಗಿಯ ರೂಪದಲ್ಲಿ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬಣ್ಣಿಸಿದರು.

    ಭಾರತದ ಪಾರಂಪರಿಕ ಚಿಕಿತ್ಸಾ ಪದ್ಧತಿ ಮುಂದುವರಿಸುತ್ತಿರುವುದಕ್ಕೆ ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಯುಪಿ ಸಿಎಂ ಯೋಗಿ, ಕರ್ನಾಟಕ ಹಾಗೂ ಉತ್ತರಪ್ರದೇಶಕ್ಕೆ ಅವಿನಾಭಾವ ಸಂಬಂಧವಿದೆ. ಕರ್ನಾಟಕ ಸಂಪ್ರದಾಯದಲ್ಲಿ ಮಂಜುನಾಥನ ಇತಿಹಾಸ ಬಹಳಷ್ಟಿದೆ. ವೀರೇಂದ್ರ ಹೆಗ್ಗಡೆ ಅವರು ಸಹ ಎಲ್ಲ ಕ್ಷೇತ್ರಗಳಲ್ಲಿ ಒಬ್ಬ ಯೋಗಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ರಾಜ್ಯಕ್ಕೂ ಯೋಗಿ ಅವರಿಗೂ ಅವಿನಾಭಾವ ಸಂಬಂಧವಿದೆ‌. ಯೋಗಿ ಅವರು ಗುರುಗಳಾಗಿದ್ದು, ಧರ್ಮ ಹಾಗೂ ಸಮಾಜದಲ್ಲಿ ಗುರುಗಳಿಗೆ ಮಹತ್ವದ ಸ್ಥಾನಮಾನವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮೂರು ದಶಕಗಳ ಕಾಲ ಸಾಮಾಜಿಕ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ದಕ್ಷ ಆಡಳಿತಗಾರರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವ ಆಡಳಿತ ತಂದಿದ್ದಾರೆ. ಭಾರತದಲ್ಲಿ ಹೊಸ ಅಧ್ಯಾಯವನ್ನು ಹುಟ್ಟು ಹಾಕಿದ್ದಾರೆ. ಇಂತಹ ಮಹನೀಯರು ನಮ್ಮ ನಾಡಿಗೆ ಬಂದಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯ ಎಂದು ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

    ವೀರೇಂದ್ರ ಹೆಗ್ಗಡೆಯವರು ಸಮಾಜದಲ್ಲಿ‌ ಇರುವ ಕಂದಾಚಾರವನ್ನು ದೂರ ಮಾಡಿ, ನೂತನ ಬದುಕಿಗೆ ಆಯಾಮವನ್ನು ಕಟ್ಟಿಕೊಟ್ಟಿದ್ದಾರೆ. ಕುಡಿಯಲು ಶುದ್ಧ ನೀರಿನ ಪರಿಕಲ್ಪನೆ‌ಯನ್ನು ಹೊಂದಿದವರು. ಕೆರೆಕಟ್ಟೆ, ಸ್ಮಶಾನದ ಅಭಿವೃದ್ಧಿ ಮಾಡಿದ್ದಾರೆ, ಸ್ತ್ರೀ ಶಕ್ತಿ ಗುಂಪುಗಳಿಗೆ ಅರ್ಥಿಕ ಸಹಾಯ ಮಾಡಿದ್ದಾರೆ. ಆರೋಗ್ಯ ಕ್ಷೇತ್ರವನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ದಿದ್ದಾರೆ ಎಂದು ಸಿಎಂ ಶ್ಲಾಘಿಸಿದರು. ಆದಿಚುಂಚನಗಿರಿಯ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.

    ಮಗನ ಉದ್ಯೋಗಕ್ಕಾಗಿ ಸಂಸದೆಯ ಕಾಲಿಗೆ ಬಿದ್ದ ಮಹಿಳೆ; ಹೈಕೋರ್ಟ್ ತೀರ್ಪಿಗೂ ಬಗ್ಗದ ಆಡಳಿತ ಮಂಡಳಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts