ಸಿಎಂ ಯೋಗಿ ಕ್ರಮ..ಭೂಕಬಳಿಕೆ ಪ್ರಕರಣದಲ್ಲಿ ಐವರು ಅಧಿಕಾರಿಗಳ ಅಮಾನತು

yogi
Published on

ಲಖನೌ: ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫಿರೋಜಾಬಾದ್‌ನ ಸಿರ್ಸಗಂಜ್‌ನಲ್ಲಿ ಅಕ್ರಮ ಭೂಕಬಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಅಧಿಕಾರಿ ಮತ್ತು ನೌಕರರನ್ನು ಅಮಾನತುಗೊಳಿಸಿದ್ದಾರೆ.

ಉಪವಿಭಾಆಧಿಕಾರಿ, ತಹಸೀಲ್ದಾರ್, ಕಂದಾಯ ನಿರೀಕ್ಷಕ, ಲೆಕ್ಕಾಧಿಕಾರಿ ಹಾಗೂ ಮತ್ತೊಬ್ಬ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇವರೆಲ್ಲರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವ ಜತೆಗೆ ಎಫ್‌ಐಆರ್‌ ದಾಖಲಿಸುವಂತೆ ಸರ್ಕಾರ ಸೂಚನೆ ನೀಡಿತ್ತು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಆರೋಪ ಮತ್ತು ಸ್ಥಾನದ ದುರ್ಬಳಕೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಆಸ್ತಿ ಹೊಂದಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಲು ರಾಜ್ಯ ವಿಜಿಲೆನ್ಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ಹೊರಗಿನವರಿಗೆ ಭೂಮಿ ಮಾರಾಟ ಮಾಡಲಾಗಿದೆ. ಇದರಿಂದ ಸ್ಥಳೀಯರಿಗೆ ಪ್ರಯೋಜನವಾಗಿಲ್ಲ. ಇದೊಂದು ಕೋಟ್ಯಂತರ ರೂಪಾಯಿಯ ದೊಡ್ಡ ಹಗರಣವಾಗಿದೆ ಎಂದು ಆರೋಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net