More

    ಜ.22ಕ್ಕೆ ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಿಗೆ ರಜೆ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

    ಅಯೋಧ್ಯೆ: ರಾಮಮಂದಿರ ಲೋಕಾರ್ಪಣೆಯಾಗುವ ಜನವರಿ 22 ರಂದು ಶಾಲೆ, ಕಾಲೇಜುಗಳಿಗೆ ಉತ್ತರ ಪ್ರದೇಶ ಸರ್ಕಾರ ರಜೆ ಘೋಷಿಸಿದೆ

    ಇದನ್ನೂ ಓದಿ: ಲಕ್ಷದ್ವೀಪ ಅಭಿವೃದ್ಧಿಗೆ ಇಸ್ರೇಲ್​ ಸಾಥ್: ನೀರು ಶುದ್ಧೀಕರಣ ಯೋಜನೆ ಜಾರಿ?

    ರಾಜ್ಯದ ಎಲ್ಲ ಶಾಲಾ-ಕಾಲೇಜುಗಳನ್ನು ಜನವರಿ 22 ರಂದು ಮುಚ್ಚಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

    ರಾಮಮಂದಿರ ಲೋಕಾರ್ಪಣೆ ಸಮಾರಂಭ ಐತಿಹಾಸಿಕವಾಗಿದ್ದು, ದೇಶಾದ್ಯಂತ ಜನರೂ ಸಜ ಹೆಚ್ಚಿನ ಸಂಖ್ಯೆಯಲ್ಲಿ ಅಯೋಧ್ಯೆಗೆ ಬರುವ ನಿರೀಕ್ಷೆಯಿದೆ. ಮಕ್ಕಳು, ಯುವಕರು ಸಹ ತಮ್ಮಊರು, ಮನೆಗಳಲ್ಲಿಯೇ ಕುಳಿತು ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

    ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 22 ರಂದು ರಜೆ ಘೋಷಿಸಲಾಗಿದೆ. ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ಮದ್ಯದ ಅಂಗಡಿಗಳನ್ನು ಸಹ ಮುಚ್ಚಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

    ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭವು ಗರ್ಭಗುಡಿಯಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ದಿನವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕೋವಿಡ್ -19 ವೈರಸ್‌ ಹರಡದಂತೆ ಬರುವ ಜನರು ಜಾಗೃತರಾಗಿರಬೇಕು ಎಂದು ಯೋಗಿ ಜನರನ್ನು ಆದಿತ್ಯನಾಥ್ ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ.

    ‘ದುಡ್ಡು ಇಲ್ಲದವ್ರು ದೇವಸ್ಥಾನ ಕಟ್ಟಲು ಸಾಧ್ಯವೇ? ಇರುವಲ್ಲೇ ದೇವರ ಪೂಜಿಸಿ’: ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts