26.8 C
Bangalore
Friday, December 13, 2019

ಇವರೆಲ್ಲರೂ ಕುಬೇರರಾದರೂ ಆದಾಯ ತೆರಿಗೆ ಕಟ್ಟಲಾಗದ ಕುಚೇಲರು: ಉತ್ತರ ಪ್ರದೇಶದಲ್ಲಿದೆ ವಿಚಿತ್ರ ಕಾನೂನು!

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಲಖನೌ: ಉತ್ತರ ಪ್ರದೇಶ ಸರ್ಕಾರದ ಸಚಿವ ಸಂಪುಟದಲ್ಲಿರುವ ಇವರೆಲ್ಲರೂ ಕೋಟ್ಯಂತರ ರೂಪಾಯಿ ವಹಿವಾಟು ಹೊಂದಿರುವವರು… ಆದಾಯದಲ್ಲಿ ಕುಬೇರರು… ಆದರೆ ಆದಾಯ ತೆರಿಗೆ ಕಟ್ಟುವ ವಿಷಯದಲ್ಲಿ ಇವರೆಲ್ಲರೂ ಕುಚೇಲರು… ಹಾಗಾಗಿ ಇವರೆಲ್ಲರ ಆದಾಯ ತೆರಿಗೆಯನ್ನು ಸರ್ಕಾರದ ಖಜಾನೆಯಿಂದಲೇ ಭರಿಸುವುದು ಅನಿವಾರ್ಯವಾಗಿದೆ…! ನಾಲ್ಕು ದಶಕಗಳ ಹಿಂದೆ ರೂಪಿಸಲಾಗಿರುವ ಕಾಯ್ದೆ ಆದಾಯ ತೆರಿಗೆ ಪಾವತಿಯಲ್ಲಿ ಈ ಕುಬೇರರನ್ನು ಕುಚೇಲರನ್ನಾಗಿ ಮಾಡಿದೆಯಂತೆ…!

ಮಾಜಿ ಪ್ರಧಾನಿ ವಿ.ಪಿ. ಸಿಂಗ್​ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಪ್ರದೇಶ ಸಚಿವರ ವೇತನ, ಭತ್ಯೆ ಮತ್ತು ಇತರೆ ಕಾಯ್ದೆ, 1981 ಅನ್ನು ಜಾರಿಗೊಳಿಸಿದ್ದರು. ಈ ಕಾಯ್ದೆಯ ಪ್ರಕಾರ ಉತ್ತರ ಪ್ರದೇಶದ ಸಿಎಂ ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರ ಆದಾಯ ತೆರಿಗೆಯನ್ನು ರಾಜ್ಯ ಖಜಾನೆಯಿಂದಲೇ ಭರಿಸಬೇಕಾಗಿದೆ.

ಈ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಚಿವ ಹಾಗೂ ರಾಜ್ಯ ಸಚಿವ ಪದವಿ ಅಲಂಕರಿಸುವವರು ತಿಂಗಳಿಗೆ 1 ಸಾವಿರ ರೂ. ವೇತನ ಪಡೆಯಬೇಕು. ಡೆಪ್ಯುಟಿ ಮಿನಿಸ್ಟರ್​ ಆದವರು ಮಾಸಿಕ 650 ರೂ. ಸಂಬಳ ಪಡೆಯಬೇಕು. ಉಪಪರಿಚ್ಛೇದ (1) ಮತ್ತು (2)ರಲ್ಲಿ ಪ್ರಸ್ತಾಪಿಸಲಾಗಿರುವ ವೇತನವು, ಇನ್ನಾವುದೇ ಮೂಲಗಳಿಂದ ಪಡೆಯುವ ವೇತನ ಮತ್ತು ಅದಕ್ಕೆ ಆದಾಯ ತೆರಿಗೆ ಕಾಯ್ದೆಯನ್ವಯ ಪಾವತಿಸಬೇಕಾದ ಆದಾಯ ತೆರಿಗೆ ಹೊರತಾಗಿರುತ್ತದೆ, ಹಾಗೂ ಆದಾಯ ತೆರಿಗೆಯನ್ನು ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಈ ಕಾಯ್ದೆ ಜಾರಿಯಾದ ನಂತರದಲ್ಲಿ ಉತ್ತರ ಪ್ರದೇಶದಲ್ಲಿ ಇದುವರೆಗೆ ಮುಲಾಯಂ ಸಿಂಗ್​ ಯಾದವ್​, ಅಖಿಲೇಶ್​ ಯಾದವ್​ (ಸಮಾಜವಾದಿ ಪಕ್ಷ), ಮಾಯಾವತಿ (ಬಿಎಸ್​ಪಿ), ಕಲ್ಯಾಣ್​ ಸಿಂಗ್​, ರಾಜನಾಥ್​ ಸಿಂಗ್​ (ಬಿಜೆಪಿ) ಹಾಗೂ ನಾರಾಯಣದತ್ತ ತಿವಾರಿ (ಕಾಂಗ್ರೆಸ್​) ಸೇರಿ ಹಾಲಿ ಸಿಎಂ ಯೋಗಿ ಆದಿತ್ಯನಾಥವರೆಗೆ 19 ಮಂದಿ ಸಿಎಂಗಳಾಗಿದ್ದಾರೆ. ಅಂದಾಜು 1 ಸಾವಿರಕ್ಕೂ ಹೆಚ್ಚು ಮಂದಿ ಸಚಿವರು ಆಗಿದ್ದಾರೆ. 1981ರ ಕಾಯ್ದೆಯನ್ವಯ ಇವರೆಲ್ಲರ ಆದಾಯ ತೆರಿಗೆಯನ್ನು ರಾಜ್ಯದ ಖಜಾನೆಯಿಂದ ಭರಿಸಲಾಗಿದೆ.

ಈ ಕಾಯ್ದೆಯನ್ವಯ ಪ್ರಸ್ತುತ ಆಡಳಿತದಲ್ಲಿರುವ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದ ಸಚಿವರೆಲ್ಲರು ಹಿಂದಿನ ಆರ್ಥಿಕ ವರ್ಷಕ್ಕೆ ಪಾವತಿಸಬೇಕಿದ್ದ ಒಟ್ಟು 86 ಲಕ್ಷ ರೂ. ಆದಾಯ ತೆರಿಗೆಯನ್ನು ಖಜಾನೆಯಿಂದಲೇ ಭರಿಸಿರುವುದನ್ನು ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿ (ಹಣಕಾಸು) ಸಂಜೀವ್​ ಮಿಟ್ಟಲ್​ ಖಚಿತಪಡಿಸಿದ್ದಾರೆ. (ಏಜೆನ್ಸೀಸ್​)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....